‘ಅಧಿಕಾರಕ್ಕೆ ಬರಲು ಬಿಜೆಪಿ–ಜೆಡಿಎಸ್‌ಗೆ ಸಾಧ್ಯವಿಲ್ಲ’
‘ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. 2008ರಲ್ಲಿ 110 ಸ್ಥಾನ ಗಳಿಸಿದರು, 2018ರಲ್ಲಿ 104 ಸ್ಥಾನ ಗೆದ್ದರು. ‘ಆಪರೇಷನ್ ಕಮಲ’ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ. ನಾವು ನುಡಿದಂತೆ ನಡೆದಿದ್ದೇವೆ, ಹೀಗಾಗಿ 2028ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.