ಬೆಂಗಳೂರು: ಪತ್ನಿಗೆ (ಡಾ.ಕೃತಿಕಾ ರೆಡ್ಡಿ) ಅನಸ್ತೇಶಿಯಾ ನೀಡಿ ಕೊಂದ ಆರೋಪ ಎದುರಿಸುತ್ತಿರುವ ಪತಿ ಡಾ. ಜಿ.ಎಸ್.ಮಹೇಂದ್ರ ರೆಡ್ಡಿಗೆ ಜಾಮೀನು ನೀಡಲು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.

ಈ ಸಂಬಂಧ ಜಿ.ಎಸ್.ಮಹೇಂದ್ರ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಮೆಯೊ ಹಾಲ್ನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಓಂಕಾರಪ್ಪ ಅವರು ಗುರುವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್, ‘ಆರೋಪಿ ಒಬ್ಬ ವೃತ್ತಿನಿರತ ವೈದ್ಯರು. ಪತ್ನಿಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಕೃತ್ಯ ಎಸಗಿರುವ ಅವರಿಗೆ ಒಂದು ವೇಳೆ ಜಾಮೀನು ಮಂಜೂರು ಮಾಡಿದರೆ ತನಿಖೆಯ ಮೇಲೆ ತೀವ್ರ ದುಷ್ಪರಿಣಾಮ ಉಂಟು ಮಾಡಲಿದೆ. ಆದ್ದರಿಂದ, ಜಾಮೀನು ಮಂಜೂರು ಮಾಡಬಾರದು’ ಎಂದು ಮನವಿ ಮಾಡಿದರು. ಈ ವಾದ ಮನ್ನಿಸಿದ ನ್ಯಾಯಾಧೀಶರು ಜಾಮೀನು ಕೋರಿಕೆ ಅರ್ಜಿ ತಿರಸ್ಕರಿಸಿ ಆದೇಶಿಸಿದರು.

ಪ್ರಕರಣವೇನು?: ಡಾ.ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞರಾಗಿದ್ದರು. ಪತಿ ಮಹೇಂದ್ರ ರೆಡ್ಡಿ ಇದೇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ. ಮಹೇಂದ್ರ ರೆಡ್ಡಿ ಮತ್ತು ಕೃತಿಕಾ ರೆಡ್ಡಿ ಹಿರಿಯರ ಸಮ್ಮುಖದಲ್ಲಿ 2024ರ ಮೇ 24ರಂದು ಮದುವೆಯಾಗಿದ್ದರು. ‘ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ’ ಎಂಬ ನೆಪವೊಡ್ಡಿ ಮಹೇಂದ್ರ ರೆಡ್ಡಿ ಬೇರೆ ಔಷಧಿಗಳನ್ನು ನೀಡುವ ಸಮಯದಲ್ಲಿ 2024ರ ಏಪ್ರಿಲ್ 23ರಂದು ಕೃತಿಕಾಗೆ ಹೆಚ್ಚುವರಿ ಅನಸ್ತೇಶಿಯಾ ನೀಡಿದ್ದರು.

ಮೃತರ ಪೋಷಕರು, ‘ಸಾವಿನ ಬಗ್ಗೆ ಯಾವುದೇ ಅನುಮಾನ ಇಲ್ಲ’ ಎಂದು ನೀಡಿದ್ದ ವಿವರಣೆ ಅನುಸಾರ ಯುಡಿಆರ್ (ಅಸ್ವಾಭಾವಿಕ ಸಾವು) ದಾಖಲಾಗಿತ್ತು. ಆದರೆ, ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿ ಬಂದ ನಂತರ, ‘ಅನಸ್ತೇಶಿಯಾದ ಪ್ರಮಾಣ ಹೆಚ್ಚಾದ ಕಾರಣ ಸಾವು ಸಂಭವಿಸಿದೆ’ ಎಂಬುದು ತಿಳಿದುಬಂದಿತ್ತು.

ಈ ಸಂಬಂಧ ಕೃತಿಕಾ ತಂದೆ ಕೆ.ಮುನಿರೆಡ್ಡಿ ನೀಡಿದ ದೂರಿನ ಅನುಸಾರ ಪೊಲೀಸರು ವರ್ತೂರಿನ ಗುಂಜೂರು ನಿವಾಸಿ ಡಾ.ಮಹೇಂದ್ರ ರೆಡ್ಡಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹೇಂದ್ರ ರೆಡ್ಡಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.