ಕೆಆರ್ ಎಸ್ ಹಿನ್ನೀರಿನ ಪ್ರದೇಶದಲ್ಲಿ ಭೂ ಒತ್ತುವರಿ ಆಗುತ್ತಿರುವುದು ಕಂಡುಬಂದಿದೆ. ಭೂ ಒತ್ತುವರಿ ತೆರವುಗೊಳಿಸುವುದರಿಂದ ಹಿನ್ನೀರಿನ ಪ್ರದೇಶದಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಾಗಿ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಸಹಕಾರಿಯಾಗಲಿದೆ. ಭೂ ಒತ್ತುವರಿ ತೆರವಿಗೆ ಉಪಮುಖ್ಯಮಂತ್ರಿ ಆದೇಶಿಸಿರುವುದು ನಿಜಕ್ಕೂ ಶ್ಲಾಘನೀಯ.
-ರಮೇಶ ಬಂಡಿಸಿದ್ದೇಗೌಡ, ಶಾಸಕ, ಶ್ರೀರಂಗಪಟ್ಟಣ
ಕೆಆರ್‌ಎಸ್ ಜಲಾಶಯಕ್ಕೆ 94 ವರ್ಷಗಳ ಇತಿಹಾಸವಿದೆ. ಬೆಂಗಳೂರು ಸೇರಿದಂತೆ ಮೈಸೂರು ಭಾಗದ ಜನತೆಗೆ ಕುಡಿಯುವ ನೀರಿನ ಜೊತೆಗೆ ಕೃಷಿ, ಕೈಗಾರಿಕಾ ಚಟುವಟಿಕೆಗಳಿಗೆ ಜಲಾಶಯದ ನೀರನ್ನು ಬಳಕೆ ಮಾಡಲಾಗುತ್ತಿದೆ. ಭೂ ಒತ್ತುವರಿ ತೆರವಿನ ಜೊತೆಗೆ ಅಕ್ರಮ ಚಟುವಟಿಕೆಗಳಿಗೂ ಕಡಿವಾಣ ಬೀಳಬೇಕು. ಡಿಸಿಎಂ ಆದೇಶದಿಂದ ರೈತರಿಗೆ ಅನುಕೂಲವಾಗಲಿದೆ.