ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಜನ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹ: ಪಾದಯಾತ್ರೆ ಅಂತ್ಯ

ಅತ್ಯಾಚಾರಿಗಳನ್ನು ಕಾಪಾಡುತ್ತಿರುವ ಪ್ರಭಾವಿಗಳಿಗೆ ಶಿಕ್ಷೆಯಾಗಲಿ
Published 8 ಸೆಪ್ಟೆಂಬರ್ 2023, 15:23 IST
Last Updated 8 ಸೆಪ್ಟೆಂಬರ್ 2023, 15:23 IST
ಅಕ್ಷರ ಗಾತ್ರ

ಬೆಂಗಳೂರು: ‘ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದಿಂದ  ಹಮ್ಮಿಕೊಂಡಿದ್ದ ಪಾದಯಾತ್ರೆ ಶುಕ್ರವಾರ ಅಂತ್ಯಗೊಂಡಿತು.

ಆಗಸ್ಟ್ 26ರಂದು ಬೆಳ್ತಂಗಡಿಯಿಂದ ಆರಂಭಗೊಂಡಿದ್ದ ‘ದೌರ್ಜನ್ಯದ ವಿರುದ್ಧ ಸೌಜನ್ಯ’ ಪಾದಯಾತ್ರೆಯು ಶುಕ್ರವಾರ ಬೆಂಗಳೂರು ತಲುಪಿತು. ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದ ಪಕ್ಷದ ಕಾರ್ಯಕರ್ತರು, ಪ್ರಕರಣದ ಮರು ತನಿಖೆಗಾಗಿ ಘೋಷಣೆ ಕೂಗಿದರು.

‘ಸೌಜನ್ಯಾ ಮಹಿಳಾ ಸುರಕ್ಷಾ ಆಯೋಗ ಸ್ಥಾಪಿಸಬೇಕು. ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು. ಮಕ್ಕಳ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸೌಜನ್ಯಾ ತಾಯಿ ಕುಸುಮಾವತಿ, ‘ನನ್ನ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ನಮಗೆ ಇದುವರೆಗೂ ನ್ಯಾಯ ಸಿಕ್ಕಿಲ್ಲ. ಅತ್ಯಾಚಾರಿಗಳಿಗೆ ಹಾಗೂ ಅವರನ್ನು ಕಾಪಾಡುತ್ತಿರುವ ಪ್ರಭಾವಿಗಳಿಗೆ ಶಿಕ್ಷೆ ಆಗಬೇಕು’ ಎಂದು ಒತ್ತಾಯಿಸಿದರು.

ಮನವಿ ಸಲ್ಲಿಕೆ: ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT