ಬೆಂಗಳೂರು: ‘ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್ಬಿಸಿ) ಚುನಾವಣೆಯ ಮತ ಎಣಿಕೆಯಲ್ಲಿ ರಾಜ್ಯದ ಎಲ್ಲ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳ ಮತಪತ್ರಗಳನ್ನು ಮಿಶ್ರಣ ಮಾಡಿ ಎಣಿಕೆ ಪ್ರಕ್ರಿಯೆ ನಡೆಸಬೇಕು, ಬೂತ್ವಾರು ನಡೆಸಬಾರದು’ ಎಂದು ಅಭ್ಯರ್ಥಿಯೂ ಆದ ಹೈಕೋರ್ಟ್ ವಕೀಲ ಆರ್.ಹೇಮಂತ ರಾಜು ಮನವಿ ಮಾಡಿದ್ದಾರೆ.

ಈ ಕುರಿತಂತೆ ಚುನಾವಣಾ ಅಧಿಕಾರಿ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ‘ಆಯಾ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳ ಬೂತ್ ಮತಪತ್ರಗಳನ್ನು ಪ್ರತ್ಯೇಕಿಸಿ ಎಣಿಕೆ ಮಾಡಬಾರದು. ಈ ರೀತಿ ಬೂತ್ವಾರು ಎಣಿಕೆ ನಡೆಸುವುದರಿಂದ ಸಂಸ್ಥೆಯಲ್ಲಿ ಗುಂಪುಗಾರಿಕೆ, ಸ್ವಜನಪಕ್ಷಪಾತವನ್ನು ಉತ್ತೇಜಿಸಿದಂತಾಗುತ್ತದೆ’ ಎಂದು ಹೇಳಿದ್ದಾರೆ.

‘ಭಾರತೀಯ ವಕೀಲರ ಪರಿಷತ್ ಅಧ್ಯಾಯ 5ರ ಉಪನಿಯಮ 10 (ಡಿ) ಅಡಿಯಲ್ಲಿ ವಿವರಿಸಲಾಗಿರುವ; ರಾಜ್ಯ ವಕೀಲರ ಪರಿಷತ್ ಮತ್ತು ಭಾರತೀಯ ವಕೀಲರ ಪರಿಷತ್ ಚುನಾವಣೆ ಪ್ರಕ್ರಿಯೆ, ನೀತಿ ಸಂಹಿತೆ, ಅರ್ಹತೆ ಮತ್ತು ಅನರ್ಹತೆಗೆ ಸಂಬಂಧಿಸಿದ ನಿಯಮ–2023ರಲ್ಲಿ ಬೂತ್ವಾರು ಮತ ಎಣಿಕೆಯನ್ನು ವರ್ಜಿಸುವಂತೆ ಪ್ರತಿಪಾದಿಸಲಾಗಿದೆ. ಆದ್ದರಿಂದ, ಎಲ್ಲ ಮತಪತ್ರಗಳನ್ನು ಮಿಶ್ರಣ ಮಾಡಿ ಎಣಿಕೆ ಪ್ರಕ್ರಿಯೆ ನಡೆಸಬೇಕು’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ರಾಜ್ಯ ವಕೀಲರ ಪರಿಷತ್ಗೆ ಇದೇ 11ರಂದು ಚುನಾವಣೆ ನಡೆದಿದ್ದು, ಮತ ಎಣಿಕೆ ಸೋಮವಾರದಿಂದ (ಮಾ.23) ಆರಂಭವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.