ಬೆಂಗಳೂರು: ‘ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ, ‘ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ’ (ಕೆಎಸ್ಸಿಎ) ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂದು ಸರ್ಕಾರಕ್ಕೆ ಆದೇಶಿಸಿರುವ ಹೈಕೋರ್ಟ್, ಈ ಮೂಲಕ ಮೂವರು ಅರ್ಜಿದಾರ ಪದಾಧಿಕಾರಿಗಳಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ಒದಗಿಸಿದೆ.

‘ನಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ, ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್ (67), ಕಾರ್ಯದರ್ಶಿ ಎ.ಶಂಕರ್ (66) ಮತ್ತು ಖಜಾಂಚಿ ಇ.ಎಸ್.ಜಯರಾಂ (59) ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹ ಆಯೋಗದಿಂದ ವಿಚಾರಣೆ ಹಾಗೂ ಪ್ರತ್ಯೇಕ ಮ್ಯಾಜಿಸ್ಟ್ರೀರಿಯಲ್ ತನಿಖೆ ನಡೆಯುತ್ತಿದೆ. ಸಂಸ್ಥೆಗಳ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಹಾಗಾಗಿ, ಅರ್ಜಿದಾರರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುವ ಅಗತ್ಯ ಕಾಣುತ್ತಿಲ್ಲ. ಆದ್ದರಿಂದ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗದೆ ತನಿಖೆ ನಡೆಯಲಿ’ ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಪದಾಂಕಿತ ಹಿರಿಯ ವಕೀಲರಾದ ಅಶೋಕ ಹಾರನಹಳ್ಳಿ ಮತ್ತು ಎಂ.ಎಸ್.ಶ್ಯಾಮಸುಂದರ್, ‘ಆರ್ಸಿಬಿ ಫ್ರಾಂಚೈಸಿ ಪದಾಧಿಕಾರಿಗಳು, ಕಾರ್ಯಕ್ರಮ ಆಯೋಜನೆಯ ಜವಾಬ್ದಾರಿ ಹೊತ್ತಿದ್ದ ಡಿಎನ್ಎ ಸಂಸ್ಥೆ ಸೇರಿದಂತೆ ಒಂದೇ ಆರೋಪಕ್ಕೆ ಸಂಬಂಧಿಸಿ ಮೂರು ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ಇವರೆಲ್ಲರನ್ನೂ ಬಂಧಿಸುವಂತೆ ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ. ಇದು ಅರ್ಜಿದಾರರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ಉಂಟು ಮಾಡಲಿದೆ’ ಎಂದರು.

‘ಅರ್ಜಿದಾರರು ವಿಚಾರಣಾ ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ತನಿಖೆಗೆ ಸಹಕರಿಸಬೇಕು’ ಎಂಬ ಷರತ್ತನ್ನು ವಿಧಿಸಿದ ನ್ಯಾಯಪೀಠ, ಪ್ರಾಸಿಕ್ಯೂಷನ್ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಲಾಗಿದೆ.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ರಾಜ್ಯ ಪ್ರಾಸಿಕ್ಯೂಟರ್ ಬಿ.ಎ.ಬೆಳ್ಳಿಯಪ್ಪ ಮತ್ತು ಹೆಚ್ಚುವರಿ ರಾಜ್ಯ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಹಾಜರಿದ್ದರು.

ನಿಖಿಲ್ ಅರ್ಜಿ ವಿಚಾರಣೆ ಮುಂದೂಡಿಕೆ

ಸದ್ಯ ಬಂಧನದಲ್ಲಿರುವ ಆರ್ಸಿಬಿ ಫ್ರಾಂಚೈಸಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಅವರ ಬಂಧನವನ್ನು ಪ್ರಶ್ನಿಸಿ ಅವರ ಪರವಾಗಿ ಅವರ ಪತ್ನಿ ಮಾಳವಿಕಾ ನಾಯಕ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನೂ ನ್ಯಾ.ಕೃಷ್ಣಕುಮಾರ್ ಅವರಿದ್ದ ಪೀಠ ಇದೇ ವೇಳೆ ವಿಚಾರಣೆ ನಡೆಸಿತು.

ನಿಖಿಲ್ ಪರ ಹಾಜರಾಗಿದ್ದ ಪದಾಂಕಿತ ಹಿರಿಯ ವಕೀಲರಾದ ಸಂದೇಶ್ ಜೆ.ಚೌಟ ಮತ್ತು ಸಿ.ಕೆ.ನಂದಕುಮಾರ್ ‘ಮುಖ್ಯಮಂತ್ರಿ ನಿರ್ದೇಶನದ ಹಿನ್ನೆಲೆಯಲ್ಲಿ ನಿಖಿಲ್ ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ನ ಕಿರಣ್ ಮತ್ತು ಸುನೀಲ್ ಮ್ಯಾಥ್ಯೂ ಅವರನ್ನು ಬಂಧಿಸಲಾಗಿದೆ. ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿದ್ದ ಕಬ್ಬನ್ ಪಾರ್ಕ್ ಠಾಣಾಧಿಕಾರಿಯನ್ನು ಸರ್ಕಾರವೇ ಅಮಾನತು ಮಾಡಿದೆ. ಹೀಗಿರುವಾಗ ಸೋಸಲೆ ಮತ್ತು ಇತರರ ಬಂಧನವು ಅಕ್ರಮವಾಗುತ್ತದೆ’ ಎಂದು ಆಕ್ಷೇಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ ಶೆಟ್ಟಿ ಅವರು ‘ಕಬ್ಬನ್ ಪಾರ್ಕ್ ಠಾಣಾಧಿಕಾರಿ ಅಮಾನತಿನ ಕಾರಣ ಉಸ್ತುವಾರಿ ತನಿಖಾಧಿಕಾರಿಯನ್ನಾಗಿ ಅಶೋಕ ನಗರ ಠಾಣೆಯ ಅಧಿಕಾರಿಯನ್ನು ಈಗಾಗಲೇ ನೇಮಕ ಮಾಡಲಾಗಿದೆ. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.