ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್ 2025) ರಾಜ್ಯದ 11 ಜಿಲ್ಲೆಗಳಲ್ಲಿ ಭಾನುವಾರ ಸುಗಮವಾಗಿ ನಡೆಯಿತು.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಒಟ್ಟು 34 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.34 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 1.21 ಲಕ್ಷ (ಶೇ 90) ಮಂದಿ ಹಾಜರಾಗಿದ್ದರು ಎಂದು ಅವರು ವಿವರಿಸಿದ್ದಾರೆ.

ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.

‘ಪರೀಕ್ಷಾ ಕೇಂದ್ರಗಳಿಂದ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳು ಕೆಇಎ ಕಚೇರಿಗೆ ಬಂದ ತಕ್ಷಣವೇ ಅವುಗಳನ್ನು ಸ್ಕ್ಯಾನ್ ಮಾಡಿ, ವೆಬ್ ಸೈಟ್ನಲ್ಲಿ ಅಪ್ಲೋಡ್ ಮಾಡುವ ಕೆಲಸ ಕೂಡ ಸಂಜೆ ವೇಳೆಗೆ ಆರಂಭವಾಯಿತು. ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕೂಡ ಈ ವಾರದಲ್ಲಿ ಪ್ರಕಟಿಸಲಾಗುವುದು’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.