ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.5ಕ್ಕೆ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

Published 29 ಆಗಸ್ಟ್ 2023, 16:13 IST
Last Updated 29 ಆಗಸ್ಟ್ 2023, 16:13 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನ.5ರಂದು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

ಸೆ.5ರಂದು ಅಧಿಸೂಚನೆ ಹೊರಡಿಸಲಾಗುವುದು. 10 ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಸೆ. 30 ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಗೆ ಅ.3ರವರೆಗೆ ಅವಕಾಶ ನೀಡಲಾಗಿದೆ ಎಂದು ಕೆಇಎ ‍ಪ್ರಕಟಣೆ ತಿಳಿಸಿದೆ.

ಇದುವರೆಗೂ ಮೈಸೂರು ವಿಶ್ವವಿದ್ಯಾಲಯ ಕೆ-ಸೆಟ್‌ ಪರೀಕ್ಷೆ ನಡೆಸುವ ಹೊಣೆಗಾರಿಕೆ ನಿಭಾಯಿಸುತ್ತಿತ್ತು. ಪರೀಕ್ಷಾ ನಕಲು ತಡೆಯಲು, ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ವಿಫಲವಾದ ಕಾರಣ ಹೊಣೆಗಾರಿಕೆಯನ್ನು ಸರ್ಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿತ್ತು. ಹಾಗಾಗಿ, ಎರಡು ವರ್ಷಗಳಿಂದ ಪರೀಕ್ಷೆ ನಡೆದಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT