ನವದೆಹಲಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (ಕೆಎಸ್ಪಿಸಿಬಿ) ಶೇ 65ರಷ್ಟು ಹುದ್ದೆಗಳು ಖಾಲಿಯಾಗಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಗಳಲ್ಲಿ ಹುದ್ದೆಗಳು ಖಾಲಿ ಇರುವ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ) ವರದಿ ಸಲ್ಲಿಸುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿತ್ತು. ದೇಶದ ಎಲ್ಲ ಮಾಲಿನ್ಯ ನಿಯಂತ್ರಣ ಮಂಡಳಿಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಬಗ್ಗೆ ಮಂಡಳಿಯು ಎನ್ಜಿಟಿಗೆ ಗುರುವಾರ ವರದಿ ಸಲ್ಲಿಸಿದೆ.

ಕರ್ನಾಟಕ ಮಾಲಿನ್ಯ ಮಂಡಳಿಗೆ 420 ಎಂಜಿನಿಯರಿಂಗ್ ಹಾಗೂ 303 ಆಡಳಿತಾತ್ಮಕ ಸೇರಿದಂತೆ 723 ಹುದ್ದೆಗಳು ಮಂಜೂರು ಮಾಡಲಾಗಿದೆ. ಈ ಪೈಕಿ 255 ಹುದ್ದೆಗಳಷ್ಟೇ ಭರ್ತಿಯಾಗಿವೆ. 267 ಎಂಜಿನಿಯರಿಂಗ್ ಹಾಗೂ 201 ಆಡಳಿತಾತ್ಮಕ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಮಂಡಳಿಯು ವರದಿಯಲ್ಲಿ ತಿಳಿಸಿದೆ. ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಗ್ಗೆ ಕರ್ನಾಟಕ ಸರ್ಕಾರವು ಫೆಬ್ರುವರಿ ತಿಂಗಳಲ್ಲಿ ಕೆಲವೊಂದು ನಿರ್ದೇಶನಗಳನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಹುದ್ದೆಗಳ ಭರ್ತಿ ಮಾಡಲು ಮಂಡಳಿ ಪ್ರಕ್ರಿಯೆ ಆರಂಭಿಸಿದೆ ಎಂದೂ ಮಂಡಳಿ ತಿಳಿಸಿದೆ.

ದೇಶದ ವಿವಿಧ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ 10,915 ಹುದ್ದೆಗಳನ್ನು ಮಂಜೂರು ಮಾಡಲಾಗಿತ್ತು. ಈ ಪೈಕಿ, 4,983 (ಶೇ 46) ಹುದ್ದೆಗಳು ಖಾಲಿ ಇವೆ. ಬಿಹಾರ, ಜಾರ್ಖಂಡ್ ಹಾಗೂ ಉತ್ತರಾಖಂಡದ ಮಂಡಳಿಗಳಲ್ಲಿ ಶೇ 75ಕ್ಕಿಂತ ಹೆಚ್ಚು ಹುದ್ದೆಗಳು ಭರ್ತಿಯಾಗದೆ ಉಳಿದಿವೆ. ಕರ್ನಾಟಕ ಸೇರಿದಂತೆ ಏಳು ರಾಜ್ಯಗಳ ಮಂಡಳಿಗಳಲ್ಲಿ ಶೇ 50ಕ್ಕಿಂತ ಹೆಚ್ಚು ಹುದ್ದೆಗಳು ಬಹು ಕಾಲದಿಂದ ಖಾಲಿ ಇವೆ ಎಂದೂ ವರದಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-51-694935382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.