ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಎಸ್‌ಪಿಸಿಬಿ: ಮಾರ್ಗಸೂಚಿ ತಿದ್ದುಪಡಿಗೆ ಹೈಕೋರ್ಟ್‌ ನಿರ್ದೇಶನ

Published 29 ನವೆಂಬರ್ 2023, 16:51 IST
Last Updated 29 ನವೆಂಬರ್ 2023, 16:51 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಈ ಹಿಂದೆ ವಿವಿಧ ನ್ಯಾಯಪೀಠಗಳು ನೀಡಿರುವ ಆದೇಶಗಳ ಅನುಸಾರ ಮಾರ್ಗಸೂಚಿಗಳನ್ನು ತಿದ್ದಪಡಿ ಮಾಡಿ‘ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ತಮ್ಮ ಅಧಿಕಾರವಧಿ ಮೊಟಕುಗೊಳಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕೆಎಸ್‌ಪಿಸಿಬಿ ಅಧ್ಯಕ್ಷ ಶಾಂತ್ ಎ. ತಿಮ್ಮಯ್ಯ ಸಲ್ಲಿಸಿದ್ದ ಅರ್ಜಿಯೂ ಸೇರಿದಂತೆ ಹಲವು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.

‘ಕೆಎಸ್‌ಪಿಸಿಬಿ ಅಧ್ಯಕ್ಷರು, ಸದಸ್ಯರು ಮತ್ತು ಸದಸ್ಯ ಕಾರ್ಯದರ್ಶಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯು, ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಹಾಗೂ ಸುಪ್ರೀಂಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್‌ಗಳ ಆದೇಶಕ್ಕೆ ತದ್ವಿರುದ್ದವಾಗಿದೆ. ಆದ್ದರಿಂದ, ಮಾರ್ಗಸೂಚಿಗಳನ್ನು ಅಗತ್ಯ ರೀತಿಯಲ್ಲಿ ತಿದ್ದುಪಡಿ ಮಾಡಬೇಕು‘ ಎಂದು ನ್ಯಾಯಪೀಠ ಸೂಚಿಸಿದೆ.

ಅರ್ಜಿದಾರ ಶಾಂತ್ ಎ.ತಿಮ್ಮಯ್ಯ ಅವರ ನೇಮಕಾತಿಯನ್ನು ನ್ಯಾಯಪೀಠ ಅಮಾನ್ಯಗೊಳಿಸಿಲ್ಲ. ‘ಅವರ ಸೇವಾವಧಿ 2024ರ ನವೆಂಬರ್ 4ರ ತನಕ ಇರಲಿದೆ‘ ಎಂದು ತಿಳಿಸಿ ಅರ್ಜಿ ವಿಲೇವಾರಿ ಮಾಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT