ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು–ಮೈಸೂರು ಹೆದ್ದಾರಿ ಟೋಲ್‌ ಶುಲ್ಕ: ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳ

Published 4 ಜುಲೈ 2023, 23:30 IST
Last Updated 4 ಜುಲೈ 2023, 23:30 IST
ಅಕ್ಷರ ಗಾತ್ರ

ಮೈಸೂರು: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಎರಡನೇ ಟೋಲ್‌ ಶುರುವಾದ ಬಳಿಕ ಈ ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳ ಪ್ರಯಾಣ ದರವೂ ಮಂಗಳವಾರದಿಂದ ಹೆಚ್ಚಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಣಂಗೂರು ಟೋಲ್‌ ಜುಲೈ 1ರಿಂದ ಕಾರ್ಯಾರಂಭ ಮಾಡಿದೆ. ಇಲ್ಲಿ ಬಸ್‌ಗಳಿಗೆ ₹525 ಟೋಲ್‌ ಸಂಗ್ರಹಿಸಲಾಗುತ್ತಿದೆ. ಅದನ್ನು ಸರಿದೂಗಿಸಲು ಕೆಎಸ್‌ಆರ್‌ಟಿಸಿಯು ಈ ಮಾರ್ಗದಲ್ಲಿನ ಟಿಕೆಟ್ ದರವನ್ನು ಸಾಮಾನ್ಯ ಸಾರಿಗೆ– ₹15, ರಾಜಹಂಸ– ₹20 ಹಾಗೂ ವೊಲ್ವೊ ಮತ್ತು ಎಲೆಕ್ಟ್ರಿಕ್‌ ಬಸ್‌ಗಳಲ್ಲಿ ₹30ರಷ್ಟು ಹೆಚ್ಚಿಸಿದೆ.

ಪ್ರಧಾನಿ ನರೇಂದ್ರ ಮೋದಿ ಇದೇ ವರ್ಷ ಮಾರ್ಚ್‌ನಲ್ಲಿ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದ್ದರು. ಅದರ ಬೆನ್ನಲ್ಲೇ ಬೆಂಗಳೂರಿನ ಕಣಮಿಣಕಿ ಹಾಗೂ ರಾಮನಗರ ಜಿಲ್ಲೆಯ ಶೇಷಗಿರಿಹಳ್ಳಿಯಲ್ಲಿನ ಟೋಲ್‌ ಪ್ಲಾಜಾಗಳಲ್ಲಿ ಟೋಲ್‌ ಸಂಗ್ರಹ ಶುರುವಾಗಿತ್ತು. ಆಗಲೂ ಬಸ್‌ ಪ್ರಯಾಣ ದರವು ₹20ರಿಂದ ₹35ರವರೆಗೆ ಹೆಚ್ಚಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT