ಕೆಎಸ್‌ಆರ್‌ಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು ಆಗಸ್ಟ್‌ನಲ್ಲಿ 43,781 ಬಸ್‌ಗಳಲ್ಲಿ ತಪಾಸಣೆ ನಡೆಸಿದ್ದರು. ನಿಗಮದ ಆದಾಯದಲ್ಲಿ ₹ 80,059 ಸೋರಿಕೆ ಪತ್ತೆಯಾಗಿತ್ತು. ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಟಿಕೆಟ್ ಅಥವಾ ಬಸ್ ಪಾಸ್ ಪಡೆದು ಪ್ರಯಾಣಿಸಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.