ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KSRTC ನೌಕರರಿಗೆ ನೀಡುವ ಪರಿಹಾರ ಮೊತ್ತ ₹3 ಲಕ್ಷದಿಂದ ₹10 ಲಕ್ಷಕ್ಕೆ ಏರಿಕೆ

Published 30 ಅಕ್ಟೋಬರ್ 2023, 14:34 IST
Last Updated 30 ಅಕ್ಟೋಬರ್ 2023, 14:34 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಸ್‌ಆರ್‌ಟಿಸಿ ನೌಕರರಿಗೆ ನೀಡುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ₹3 ಲಕ್ಷದಿಂದ ₹10 ಲಕ್ಷಕ್ಕೆ ಏರಿಸಲಾಗಿದೆ. ಅಪಘಾತ ಹೊರತುಪಡಿಸಿ ಅನ್ಯ ಕಾರಣದಿಂದ ಸಿಬ್ಬಂದಿ ಮೃತಪಟ್ಟರೆ ಅವರ ಕುಟುಂಬಕ್ಕೆ ಈ ಪರಿಹಾರ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ಸಿಬ್ಬಂದಿ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ ₹1 ಕೋಟಿ ನೀಡುವ ಯೋಜನೆ ಈಗಾಗಲೇ ಜಾರಿಯಲ್ಲಿದೆ. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಅಂದರೆ ಕ್ಯಾನ್ಸರ್, ಪಾರ್ಶ್ವವಾಯು, ಹೃದಯಾಘಾತ, ಮೂತ್ರಪಿಂಡ ವೈಫಲ್ಯ ಸೇರಿದಂತೆ ಇತರೆ ಕಾಯಿಲೆಗಳಿಗೆ ತುತ್ತಾಗಿ ಸಾವಿಗೀಡಾದರೆ ಕಲ್ಯಾಣ ಯೋಜನೆಯ ಪರಿಹಾರ ಸಿಗಲಿದೆ.

ಯೋಜನೆಗೆ ನೌಕರರ ತಿಂಗಳ ವಂತಿಕೆ ₹100 ಅನ್ನು ₹ 200ಕ್ಕೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ ₹ 50 ವಂತಿಕೆಯನ್ನು ₹ 100ಕ್ಕೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಪರಿಷ್ಕೃತ ಆದೇಶವು ನವೆಂಬರ್ 1ರಿಂದ ಜಾರಿಯಾಗಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT