ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳಿಗಾಗಿ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಲಿರುವುದರಿಂದ ಕೆಎಸ್ಆರ್ಟಿಸಿ 2,000 ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಮಾರ್ಚ್ 28ರಿಂದ 30 ರವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್ 31ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ಇರಲಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್ಗಳು ಸಂಚರಿಸಲಿವೆ.

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್ಗಳು ಸಂಚರಿಸಲಿವೆ. ನಿಗಮದ ಕಾರ್ಯಾಚರಣೆ ವ್ಯಾಪ್ತಿಯ ಎಲ್ಲ ತಾಲ್ಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್ಅಪ್ ಪಾಯಿಂಟ್ ಮಾಹಿತಿಯನ್ನು ಗಮನಿಸುವಂತೆ ಕೋರಲಾಗಿದೆ.

www.ksrtc.karnataka.gov.in ವೆಬ್ಸೈಟ್ ಮೂಲಕ ಇ-ಟಿಕೆಟ್ ಬುಕಿಂಗ್ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ 5 ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ 10 ರಿಯಾಯಿತಿ ದೊರೆಯಲಿದೆ ಎಂದು ಕೆಎಸ್ಆರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
.ಕೆಎಸ್ಆರ್ಟಿಸಿ | ಟಿಕೆಟ್ ರಹಿತ ಪ್ರಯಾಣ: 3621 ಜನರಿಗೆ ದಂಡ.KSRTC & BMTC: ಕೆಎಸ್ಆರ್ಟಿಸಿ, ಬಿಎಂಟಿಸಿಗೆ ಪ್ರಶಸ್ತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.