ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಿಂದಾಗುವ ತೊಂದರೆ ತಪ್ಪಿಸಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆನ್ಲೈನ್ ಅಥವಾ ಪರ್ಯಾಯ ವಿಧಾನ ಬಳಸಿಕೊಂಡು ಪಾಠ ಬೋಧನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲ ಜಿಲ್ಲೆಗಳ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

ತರಗತಿಗಳಿಗೆ ವಿದ್ಯಾರ್ಥಿಗಳ ನೇರ ಹಾಜರಾತಿ ಕಡ್ಡಾಯ ಅಲ್ಲ. ಆದರೆ, ತರಗತಿಗಳಿಗೆ ಹಾಜರಾಗುವವರಿಗೆ ಸಾರಿಗೆ ನೌಕರರ ಮುಷ್ಕರದಿಂದ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ, ತುರ್ತು ಸಂದರ್ಭಗಳಲ್ಲಿ ಆಯಾ ಜಿಲ್ಲಾಡಳಿತದ ಸೂಚನೆ ಅನ್ವಯ ಕ್ರಮ ತೆಗೆದುಕೊಳ್ಳಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.

ಆರನೇ ವೇತನ ಆಯೋಗದ ಶಿಫಾರಸು ಅನ್ವಯ ಆಗಲೇಬೇಕು ಎಂದು ಸಾರಿಗೆ ನೌಕರರ ಕೂಟ ಪಟ್ಟು ಹಿಡಿದಿದ್ದು, ಮುಷ್ಕರ ನಡೆಸುತ್ತಿದೆ.

ಓದಿ:ಮುಷ್ಕರ: ಬಸ್ ಓಡಾಟಕ್ಕೆ ಸಂಚಕಾರ, ಸರ್ಕಾರದ ಎಚ್ಚರಿಕೆಗೆ ಬಗ್ಗದ ಸಾರಿಗೆ ನೌಕರರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.