ಬೆಂಗಳೂರು: ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮಕ್ಕಾಗಿ ಕೆಎಸ್ಆರ್ಟಿಸಿಗೆ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆ, ಸ್ವಯಂ ಚಾಲಿತ ಚಾಲನಾ ಪರೀಕ್ಷೆ, ಆನ್ಲೈನ್ ಪರೀಕ್ಷೆಗಳು, ದಾಖಲೆಗಳ ಡಿಜಿಟಲ್ ಪರಿಶೀಲನೆ, ವೆಬ್ ಕ್ಯಾಸ್ಟಿಂಗ್, ಅಟೋ ಜನರೇಟಡ್ ಅಂಕಪಟ್ಟಿ ನೀಡುವ ಮೂಲಕ 2,000 ಚಾಲಕ/ ನಿರ್ವಾಹಕರು, 300 ತಾಂತ್ರಿಕ ಸಿಬ್ಬಂದಿ, 441 ಅನುಕಂಪ ಆಧಾರದಲ್ಲಿ ಹುದ್ದೆಗಳನ್ನು ನೇಮಕಾತಿ ಮಾಡಲಾಗಿದೆ.

ಜೊತೆಗೆ ಆರು ತಿಂಗಳಲ್ಲಿ 12,000ಕ್ಕೂ ಹೆಚ್ಚು ಸಿಬ್ಬಂದಿಗೆ ಪರಿಣಾಮಕಾರಿ ತರಬೇತಿ ನೀಡಲಾಗಿದ್ದು, ನಿಗಮದ ಸಮಗ್ರ ವಿಷಯ ನಿರೂಪಣೆಯಲ್ಲಿನ ಬದಲಾವಣೆಗೆ ಸಹಕಾರಿಯಾಗಿತ್ತು. ಇದನ್ನು ಪರಿಗಣಿಸಿ ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ದೆಹಲಿಯಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಪ್ರಶಸ್ತಿ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.