ಬೆಂಗಳೂರು: 'ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿಸ್ಸೀಮರು' ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, 'ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿ ಅಂಥ ಸಭೆ ನಡೆಸಬಹುದು. ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ?' ಎಂದು ಕೇಳಿದ್ದಾರೆ.
.ರಾಜ್ಯದಲ್ಲಿ ಇರೋದು ಹೆಬ್ಬೆಟ್ಟು ಗೃಹ ಸಚಿವರಾ: ಕುಮಾರಸ್ವಾಮಿ ಪ್ರಶ್ನೆ.ಬಳ್ಳಾರಿ| ಗೃಹಸಚಿವ ಪರಮೇಶ್ವರ್ ಅಸಮರ್ಥರು: ಶಾಸಕ ಜನಾರ್ದನ ರೆಡ್ಡಿ.
'ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್ಪೀರಿಯನ್ಸ್ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ' ಎಂದು ಪ್ರಶ್ನಿಸಿದ್ದಾರೆ.

'ಹೋಗಲಿ, ನೀವು ಮೀಟಿಂಗ್ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದಾರಾ? ಇಲ್ಲವಲ್ಲ. ಅದಕ್ಕೆ ನಾನು ಹೇಳಿದ್ದು ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್ ಸ್ಟ್ಯಾಂಪ್ ಗೃಹ ಮಂತ್ರಿಗಳಾ? ಎಂದು. ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರಾ?' ಎಂದು ಟೀಕಿಸಿದ್ದಾರೆ.

'ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ಪೀರಿಯನ್ಸ್ ಅಲ್ಲಾ ಡಿಕೆಶಿರವರೇ, ಏನೋ ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ 'ಹುಲು ರಾಜಕಾರಣಿ' ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ. ವಿನಮ್ರವಾಗಿ ಒಪ್ಪಿಕೊಳ್ಳುವೆ' ಎಂದಿದ್ದಾರೆ.

'ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.