ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಮುರ್ಮುಗೆ ಸಿದ್ದರಾಮಯ್ಯ ಏಕವಚನ ಬಳಕೆ: ಸಿ.ಎಂ ವಜಾಗೆ ಎಚ್‌ಡಿಕೆ ಆಗ್ರಹ

Published 28 ಜನವರಿ 2024, 15:26 IST
Last Updated 28 ಜನವರಿ 2024, 15:26 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನ ಬಳಕೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸೇರಿ ಅನೇಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಶೋಷಿತ ಸಮುದಾಯಕ್ಕೆ ಸೇರಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವಳನ್ನು ನೂತನ ಸಂಸತ್‌ ಭವನ ಹಾಗೂ ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಗೆ ಕರೆಯಲಿಲ್ಲ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಸಿದ್ದರಾಮಯ್ಯ ಅವರ ಭಾಷಣದ ತುಣುಕನ್ನು ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ ಎಚ್‌.ಡಿ.ಕುಮಾರಸ್ವಾಮಿ, ‘ಗೌರವಾನ್ವಿತ ರಾಷ್ಟ್ರಪತಿ, ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರಿಗೆ ಸಿದ್ದರಾಮಯ್ಯ ಏಕವಚನ ಬಳಸಿದ್ದಾರೆ. ತುಚ್ಛವಾಗಿ ಸಂಭೋದಿಸಿದ ಕೀಳು, ವಿಕೃತ, ಹೀನ ನಾಲಿಗೆಯ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT