ಬೆಂಗಳೂರು: ‘ಎಲ್ಲದರಲ್ಲೂ ಸಿದ್ಧಹಸ್ತರಾದರೆ ಉಪಯೋಗವೇನು? ಇನ್ನೊಬ್ಬರ ಎದೆಗಾರಿಕೆ ಪ್ರಶ್ನಿಸುವ ಮಹಾನುಭಾವರು, ತಮ್ಮ ಅವಧಿಯಲ್ಲಿ ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿ ಯನ್ನು (ಜಾತಿಗಣತಿ) ಏಕೆ ಕುರ್ಚಿ ಕೆಳಗೆ ಹಾಕಿಕೊಂಡು ಕುಳಿತಿದ್ದರು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೆಸರು ಉಲ್ಲೇಖಿಸಿದೇ ಸರಣಿ ಟ್ವೀಟ್ ಮಾಡಿರುವ ಅವರು, ‘ಸತ್ಯ ಹೇಳುವುದಕ್ಕೂ ಗುಂಡಿಗೆ ಬೇಕು. ಚುನಾವಣೆ ಬಂದಾಗ ಯಾವುದೋ ಒಂದು ವಿಷಯದ ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿ ಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ?’ ಎಂದು ಕುಟುಕಿದ್ದಾರೆ.

‘ರಾಜಕಾರಣದಲ್ಲಿ ಕ್ಷಣಕ್ಕೊಂದು ಬಣ್ಣ ಬದಲಿಸಿಕೊಂಡು ಓಡಾಡುವವರ ಬಗ್ಗೆ ನನಗೆ ಗೊತ್ತಿದೆ. ಇವರು ರಾಜಕೀಯ ಊಸರವಳ್ಳಿಗಳು, ಜನರ ಪಾಲಿನ ಮಗ್ಗುಲ ಮುಳ್ಳುಗಳು! ಮುಳ್ಳನ್ನು ಹೇಗೆ ತೆಗೆಯಬೇಕು ಎಂಬುದು ಜನರಿಗೆ ಗೊತ್ತಿದೆ, ಆ ಕಾಲವೂ ಹತ್ತಿರದಲ್ಲೇ ಇದೆ’ ಎಂದು ಹೇಳಿದ್ದಾರೆ.

‘ಇವರು ಅಧಿಕಾರದಲ್ಲಿದ್ದಾ
ಗಲೇ ಕಾಂತರಾಜು ಆಯೋಗದ ವರದಿಯು ಬಂದಿತ್ತು. ಆಗಲೇ ಅಂಗೀಕರಿಸಿ ಬಿಡುಗಡೆ ಮಾಡಬಹುದಿತ್ತಲ್ಲ? ಅವಕಾಶ ಇದ್ದಾಗ ಮಾಡದೇ ಈಗ ಆಷಾಢಭೂತಿತನ ಏಕೆ? ಜನರಿಗೆ ಅರ್ಥವಾಗದೆಂಬ ಅತಿಬುದ್ಧಿವಂತಿ ಕೆಯೇ? ಅತಿ
ಬುದ್ಧಿವಂತರೆಲ್ಲ ಆಮೇಲೆ ಏನಾದರು ಎಂಬುದು ಕರ್ನಾಟಕದ ಜನರಿಗೆ
ಚೆನ್ನಾಗಿ ಗೊತ್ತಿದೆ’ ಎಂದು ಅವರು ಹೇಳಿದ್ದಾರೆ.

‘ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ’ ಎಂದು ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಹೇಳಿದ್ದಾರೆ. ಸಹಿಯೇ ಇಲ್ಲದ ವರದಿ ಅಧಿಕೃತ ಹೇಗಾಗುತ್ತದೆ? ಐದು
ವರ್ಷ ಆಡಳಿತ ನಡೆಸಿದವರಿಗೆ, ಸಂವಿಧಾನದ ಬಗ್ಗೆ ಹಾದಿಬೀದಿಯಲ್ಲಿ ನಿಂತು ಪಾಠ ಮಾಡುವವರಿಗೆ ಈ ಮಟ್ಟಿಗೆ ಜ್ಞಾನ ಇಲ್ಲವೇ? ಸಹಿ ಇಲ್ಲದ ಕಾಗದ ಪತ್ರಕ್ಕೆ ಬೆಲೆ ಇಲ್ಲ. ಅಪ್ಪ ಅಮ್ಮನಿಲ್ಲದ ಕೂಸು ಅನಾಥ. ಹಾಗಾದರೆ, ಸಹಿ ಇಲ್ಲದ ವರದಿ ಸ್ವೀಕಾರ ಮಾಡಿ, ಆಗ ಸುಮ್ಮನಿದ್ದು, ಈಗ ಹಾಹಾಕಾರ ಮಾಡಿದರೇನು ಪ್ರಯೋ ಜನ? ಊಸರವಳ್ಳಿ ಉಸಾಬರಿ ಎಂದರೆ ಇದೇ ಇರಬೇಕು’ ಎಂದು ಅವರು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.