ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಚರ್ಚೆಗೆ ಬನ್ನಿ- ಡಿಕೆಶಿ

Published 26 ಅಕ್ಟೋಬರ್ 2023, 9:39 IST
Last Updated 26 ಅಕ್ಟೋಬರ್ 2023, 9:39 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಏನು ಮಾಡಿದ್ದೇನೆ? ಕುಮಾರಸ್ವಾಮಿ ಏನು ಮಾಡಿದ್ದಾರೆ? ಎಂಬ ವಿಷಯದ ಬಗ್ಗೆ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ದಾಖಲೆ ಸಹಿತ ಅಧಿವೇಶನದಲ್ಲಿ ಚರ್ಚೆ ಮಾಡೋಣ. ಕುಮಾರಸ್ವಾಮಿಯ ಸವಾಲು ಸ್ವೀಕರಿಸಿದ್ದೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಸವಾಲು ಹಾಕಿದರು.

ಕುಮಾರಸ್ವಾಮಿ ಅವರು ಸವಾಲು ಸ್ವೀಕರಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಗುರುವಾರ ಉತ್ತರಿಸಿದ ಅವರು, ‘ಎಲ್ಲವನ್ನೂ ಅಧಿವೇಶನದಲ್ಲಿ ಬಿಚ್ಚಿಡೋಣ. ಅವರ ಬಳಿ ಇರುವ ಸರಕುಗಳನ್ನು ತಂದು ಅವರು ಮಾತನಾಡಲಿ. ನನ್ನ ಬಳಿ ಇರುವ ದಾಖಲೆಗಳನ್ನು ಮುಂದಿಟ್ಟು ನಾನು ಮಾತನಾಡುತ್ತೇನೆ’ ಎಂದರು.

‘ಈ ಹಿಂದೆಯೂ ನಾನು ಇಂಥ ಬಹಿರಂಗ ಸವಾಲು ಸ್ವೀಕರಿಸಿ, ಉತ್ತರ ಕೊಟ್ಟಿದ್ದೇನೆ. ಬಳಿಕ ನನ್ನ ಬಳಿ ಬಂದು ಕ್ಷಮೆ ಕೇಳಿದ್ದೂ ಇದೆ’ ಎಂದರು.

ವಿಧಾನಸೌಧದ ತಮ್ಮ ಕಚೇರಿಯನ್ನು ನವೀಕರಿಸುವ ಅಗತ್ಯದ ಬಗ್ಗೆ ಬಿಜೆಪಿ ಮಾಡಿರುವ ಟೀಕೆ ಬಗ್ಗೆ ಕೇಳಿದಾಗ, ‘ಕಚೇರಿಯಲ್ಲಿ ನಾನು ಅನೇಕ ಗಣ್ಯರನ್ನು ಭೇಟಿ ಮಾಡಬೇಕಾಗುತ್ತದೆ. ವಿಧಾನಸೌಧಕ್ಕೆ ನೆದರ್ಲೆಂಡ್ಸ್‌ ಪ್ರಧಾನಿ ಬಂದಿದ್ದಾಗ ಸಚಿವ ಎಂ.ಬಿ. ಪಾಟೀಲರ ಕೊಠಡಿಗೆ ತೆರಳಿ ನಾನು ಭೇಟಿ ಮಾಡಬೇಕಾಯಿತು. ಗಣ್ಯರು ಭೇಟಿಗೆ ಬಂದಾಗ ಗೌರವ ನೀಡಲು ಅಚ್ಚುಕಟ್ಟಾದ ಕೊಠಡಿ, ಸೂಕ್ತ ಸ್ಥಳಾವಕಾಶ ಇರಬೇಕು. ನಾವು ನಮ್ಮ ಮಣ್ಣಿನ ಸಂಸ್ಕೃತಿ ಪಾಲಿಸಬೇಕು. ಬೆಂಗಳೂರು ಹಾಗೂ ಇಂಡಿಯಾವನ್ನು ಉತ್ತಮವಾಗಿ ಬಿಂಬಿಸಬೇಕು. ಅದಕ್ಕಾಗಿ ನವೀಕರಿಸುತ್ತಿದ್ದೇನೆ. ಬಿಜೆಪಿಯವರಿಗೆ ಸಾಮಾನ್ಯ ಜ್ಞಾನ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT