ಹುಬ್ಬಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಕೈಕೆಳಗೆ ನಾನು ಪ್ರಮುಖ ಖಾತೆ ನಿರ್ವಹಿಸುತ್ತಿದ್ದೇನೆ. ಅಲ್ಲಿ ನನಗೆ ಸಂತೃಪ್ತಿ ಇದೆ. ಬೇರೆ ಹುದ್ದೆಗಳ ಬಗ್ಗೆ ಚಿಂತಿಸುವ ಪ್ರಶ್ನೆಯೇ ಇಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಪೇಶ್ವೆ ವಂಶದವರು ಮುಖ್ಯಮಂತ್ರಿ ಆಗಬಾರದು ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶನಿವಾರ ಪ್ರತಿಕ್ರಿಯಿಸಿದರು. ‘ಕುಮಾರಸ್ವಾಮಿ ಅವರ ಅಪ್ರಬುದ್ಧ–ಬಾಲಿಶ ಹೇಳಿಕೆಗಳಿಗೆ ಇದಕ್ಕಿಂತ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ’ ಎಂದರು.

‘ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಬೇಕು’ ಎಂಬ ಸಚಿವ ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಈಗಾಗಲೇ ಬಾಯಿತಪ್ಪಿನಿಂದ ನೀಡಿದ ಹೇಳಿಕೆಗೆ ಅವರು ಕ್ಷಮೆ ಕೇಳಿದ್ದಾರೆ’ ಎಂದರು.

ನೋಟಿಸ್ ನೀಡುವೆ: ‘ರಾಷ್ಟ್ರೀಯ ವೈದ್ಯಕೀಯ ಮಂಡಳಿಗೆ ಸದಸ್ಯರನ್ನು ನೇಮಿಸುವ ಸಂಬಂಧ ನನ್ನ ಕಚೇರಿಯ ಸಿಬ್ಬಂದಿಗೆ ₹ 2.5 ಕೋಟಿ ಹಣ ಸಂದಾಯವಾಗಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ನ ಎಸ್.ಎಲ್. ಭೋಜೇಗೌಡ ಅವರಿಗೆ ನೋಟಿಸ್ ನೀಡಲಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.