ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ತಿತ್ವಕ್ಕಾಗಿ BJP ನಾಯಕರ ಕಾಲಿಗೆ ಬಿದ್ದ ಕುಮಾರಸ್ವಾಮಿ: ಪ್ರಿಯಾಂಕ್ ಖರ್ಗೆ

ಕಲಬುರಗಿಯಲ್ಲಿ ಹೇಳಿಕೆ
Published 25 ಸೆಪ್ಟೆಂಬರ್ 2023, 12:48 IST
Last Updated 25 ಸೆಪ್ಟೆಂಬರ್ 2023, 12:48 IST
ಅಕ್ಷರ ಗಾತ್ರ

ಕಲಬುರಗಿ: 'ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ದೆಹಲಿಗೆ ಹೋಗಿ, ಅಲ್ಲಿನ ಬಿಜೆಪಿ ನಾಯಕರ ಕಾಲು ಬಿದ್ದಿದ್ದಾರೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

'ಇಂಡಿಯಾ' ಒಕ್ಕೂಟ ಖುಷಿ ಪಡಿಸಲು ತಮಿಳುನಾಡಿಗೆ ನೀರಿ ಹರಿಸಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ‌ ಚಿಂಚೋಳಿಯಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ‌ ಸಚಿವರು, 'ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ವರಿಷ್ಠ ಜೆ.ಪಿ ನಡ್ಡಾ ಅವರನ್ನು ಹಾಗೂ ಜೆಡಿಎಸ್‌ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.‌ ಬರೀ ತಮ್ಮ ಪಕ್ಷದ ಭವಿಷ್ಯದ ಬಗ್ಗೆ ಚರ್ಚಿಸಿದ್ದಾರೆಯೋ ಅಥವಾ ಕರ್ನಾಟಕದ ಜನತೆಯ ಬಗ್ಗೆಯೂ ಮಾತುಕತೆ ನಡೆಸಿದ್ದಾರಾ?' ಎಂದು ಪ್ರಶ್ನಿಸಿದರು.

'ದೆಹಲಿಗೆ ಹೋಗಿ 2ರಿಂದ 3 ದಿನ ಕಾದು ಕುಳಿತರೂ ಕೇಂದ್ರದ ಸಚಿವರು ಭೇಟಿಗೆ ಸಿಗುತ್ತಿಲ್ಲ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ‌ಅವರ ಏಕಪಾತ್ರ ಅಭಿನಯ ಕಾಣಿಸುತ್ತಿದ್ದು, ಎಲ್ಲ ನಿರ್ಧಾರವನ್ನು ಅವರೇ ತೆಗೆದುಕೊಳ್ಳುತ್ತಿದ್ದಾರೆ. ಜನರಿಗೆ ಬೇರೆ ಸಚಿವರ ಹೆಸರು ಸಹ ಗೊತ್ತಿಲ್ಲ. ಕೆಲಸ ಇಲ್ಲದೆ ಬಾಗಿಲು ಹಾಕಿಕೊಂಡು ಸುಮ್ಮನೆ ಕುಳಿತಿರುವ ಕೇಂದ್ರ ಸಚಿವರ ಮನೆಯ ಮುಂದೆ ಎಷ್ಟು ದಿನ ಕಾಯುವುದು' ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT