ಬೆಂಗಳೂರು: ಕೇಂದ್ರದ ಹಿಂದುಳಿದ ಜಾತಿಗಳ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂಬ ಕುಂಚಿಟಿಗ ಸಮುದಾಯದವರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕುಂಚಿಟಿಗ ಸಮುದಾಯದವನ್ನು ಕೇಂದ್ರ ಸರ್ಕಾರದ ‘ಇತರೆ ಹಿಂದುಳಿದ ವರ್ಗಗಳ ಜಾತಿ’ ಪಟ್ಟಿಗೆ ಸೇರಿಸುವಂತೆ ಶಿಫಾರಸು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
‘ಕೊಡವ’ರಿಗೆ ಮಾನ್ಯತೆ: ಕರ್ನಾಟಕದ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ಕೊಡವ ಸಮುದಾಯದವರನ್ನು ‘ಕೊಡಗರು’ ಎಂದು ನಮೂದಿಸಲಾಗಿತ್ತು. ಅಸ್ಮಿತೆಯನ್ನು ಪ್ರತಿನಿಧಿಸುವ ಪದವಾದ ‘ಕೊಡವರು’ ಎಂದು ಬದಲಾಯಿಸಬೇಕು ಎಂಬ ಬೇಡಿಕೆ ಸಮುದಾಯದವರದ್ದಾಗಿತ್ತು. ಸಚಿವ ಸಂಪುಟ ಸಭೆಯಲ್ಲಿ ಒಬಿಸಿಯ ಪ್ರವರ್ಗ 3 ಎ ನಲ್ಲಿರುವ ‘ಕೊಡಗ’ರನ್ನು ‘ಕೊಡವ’ ಎಂದು ಬದಲಾಯಿಸಲು ಸಭೆ ಒಪ್ಪಿಗೆ ನೀಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.