ಬೆಂಗಳೂರು: ಕೃಷಿ ಪಂಪ್ಸೆಟ್ಗಳಿಗೆ ಹಗಲು ಹೊತ್ತಿನಲ್ಲೇ ಗುಣಮಟ್ಟದ ವಿದ್ಯುತ್ ಪೂರೈಸುವ ಉದ್ದೇಶದಿಂದ ರೂಪಿಸಿರುವ ಕುಸುಮ್-ಸಿ ಯೋಜನೆಯಡಿ ರಾಜ್ಯದಲ್ಲಿ 2,520 ಮೆಗಾವಾಟ್ ಸೌರ ವಿದ್ಯುತ್ ಉತ್ಪಾದನೆಗೆ ಸರ್ಕಾರ ಮುಂದಡಿ ಇಟ್ಟಿದೆ.

ಆರಂಭದಲ್ಲಿ ಈ ಯೋಜನೆಯಡಿ 3,900 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಗುರಿ ಇತ್ತು. ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ರಾಜ್ಯದಲ್ಲಿ ಇನ್ನೂ 750 ಮೆಗಾವಾಟ್ ಸೌರ ವಿದ್ಯುತ್ ಉತ್ಪಾದನೆಗೆ ಅವಕಾಶ ಕಲ್ಪಿಸಿದೆ. 2,520 ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ ಟೆಂಡರ್ ಕರೆಯಲಾಗಿದೆ.

ಯೋಜನೆಯಡಿ 1 ಮೆಗಾವಾಟ್ ಸೌರ ವಿದ್ಯುತ್ ಉತ್ಪಾದನೆಗೆ ಸುಮಾರು ₹4 ಕೋಟಿ ವೆಚ್ಚವಾಗಲಿದೆ. ಕೇಂದ್ರ ಸರ್ಕಾರವು ₹1 ಕೋಟಿ ಸಹಾಯಧನ ನೀಡಲಿದೆ. ಉಳಿದ ಹಣವನ್ನು ಖಾಸಗಿ ಕಂಪನಿಗಳೇ ಭರಿಸಬೇಕಾಗುತ್ತದೆ. ಉತ್ಪಾದನಾ ವೆಚ್ಚ ಆಧರಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಪ್ರತಿ ಯೂನಿಟ್ ವಿದ್ಯುತ್ಗೆ ಗರಿಷ್ಠ ₹3.17 ದರ ನಿಗದಿಪಡಿಸಿದೆ. ಆ ಪ್ರಕಾರ ಖರೀದಿ ಮಾಡಿ, ಆಯಾ ಫೀಡರ್ಗಳ ವ್ಯಾಪ್ತಿಯಲ್ಲಿ ಬರುವ ರೈತರ ಪಂಪ್ಸೆಟ್ಗಳಿಗೆ ಪೂರೈಸಲಾಗುತ್ತದೆ.

ಕುಸುಮ್-ಸಿ ಯೋಜನೆಯಡಿ ರಾಜ್ಯದಲ್ಲಿನ 397 ವಿದ್ಯುತ್ ಸರಬರಾಜು ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ 2,520 ಮೆಗಾವಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕಗಳನ್ನು ಆರಂಭಿ
ಸಲಾಗುತ್ತದೆ. ಇದರಿಂದ 1,684 ಫೀಡರ್ಗಳ ಮೂಲಕ 6,70,185 ಕೃಷಿ ಪಂಪ್ಸೆಟ್ಗಳಿಗೆ ಸೌರ ವಿದ್ಯುತ್ ನೀಡಲು ಉದ್ದೇಶಿಸಲಾಗಿದೆ. ಇದರಿಂದಾಗಿ ರೈತರ ಬೆಳೆಗಳಿಗೆ ನೀರು ಹರಿಸಲು ಹಗಲಿನಲ್ಲೇ ವಿದ್ಯುತ್ ಲಭ್ಯವಾಗಲಿದೆ. ಅಲ್ಲದೆ ವಿದ್ಯುತ್ ಪರಿವರ್ತಕಗಳ ಮೇಲಿನ ಒತ್ತಡವೂ ಕಡಿಮೆಯಾಗಲಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಕುಸುಮ್–ಸಿ ಯೋಜನೆಯಡಿ ಒಟ್ಟು 1,159 ಮೆಗಾವಾಟ್ ಸೌರ ವಿದ್ಯುತ್ ಉತ್ಪಾದಿಸುವ 157 ಯೋಜನೆಗಳಿಗೆ ಅನುಮತಿ ನೀಡಲಾಗಿದೆ. ಈ ಪೈಕಿ ಸುಮಾರು 200 ಮೆಗಾವಾಟ್ ಸಾಮರ್ಥ್ಯದ 32 ಯೋಜನೆಗಳು ಪೂರ್ಣಗೊಂಡಿವೆ. ಈ ತಿಂಗಳ ಅಂತ್ಯದ ವೇಳೆಗೆ 500 ಮೆಗಾವಾಟ್ ಹಾಗೂ ಮಾರ್ಚ್ಗೆ 1,051 ಮೆಗಾವಾಟ್ ಸಾಮರ್ಥ್ಯದ ಸೌರ ವಿದ್ಯುತ್ ಯೋಜನೆಗಳು ಪೂರ್ಣಗೊಳ್ಳಲಿದೆ.

ಕೆರೆಗಳ ಜಾಗ ಬಳಕೆ: ‘ಬೆಂಗಳೂರು ಸುತ್ತಮುತ್ತ ಭೂಮಿಯ ಬೆಲೆ ಜಾಸ್ತಿ ಇದ್ದು ರೈತರು ಜಾಗ ನೀಡಲು ಮುಂದೆ ಬರುತ್ತಿಲ್ಲ. ಹೀಗಾಗಿ ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನದಲ್ಲಿರುವ ಕೆರೆಗಳ ಅಂಗಳ ಬಳಸಿಕೊಂಡು ಸೌರ ವಿದ್ಯುತ್ ಘಟಕಗಳನ್ನು ಆರಂಭಿಸಲಾಗುತ್ತಿದೆ’ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎನ್.ಶಿವಶಂಕರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ, ಕುಂದಾಣ ಕೆರೆ ಅಂಗಳದಲ್ಲಿ ಈಗಾಗಲೇ ಸೌರವಿದ್ಯುತ್ ಘಟಕಗಳನ್ನು ಆರಂಭಿಸಿ, ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಇದಲ್ಲದೆ ದೊಡ್ಡಬಳ್ಳಾಪುರ, ಹೊಸಕೋಟೆ, ದೇವನಹಳ್ಳಿಯ ವಿವಿಧ ಉಪಕೇಂದ್ರಗಳ ವ್ಯಾಪ್ತಿಯ ಕೆರೆ ಅಂಗಳದಲ್ಲಿ 10 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಒಂದು ಮೆಗಾವಾಟ್ ಸೌರ ವಿದ್ಯುತ್ ಉತ್ಪಾದನೆಗೆ ಸುಮಾರು ನಾಲ್ಕು ಎಕರೆ ಜಾಗ ಬೇಕಾಗುತ್ತದೆ. ಈ ಜಾಗವನ್ನು 25 ವರ್ಷಕ್ಕೆ ಗುತ್ತಿಗೆ ಪಡೆಯಬಹುದು. ಒಂದು ಎಕರೆಗೆ ವರ್ಷಕ್ಕೆ ₹25 ಸಾವಿರ ಬಾಡಿಗೆ ನಿಗದಿಪಡಿಸಲಾಗಿದೆ. ಈ ದರವನ್ನು ನೀಡಿ ಖಾಸಗಿಯವರು ರೈತರಿಂದ ಜಮೀನು ಪಡೆಯಬಹುದು. ಒಂದು ವೇಳೆ ಸರ್ಕಾರಿ ಜಾಗ ಇದ್ದರೆ, ಅದನ್ನು ನೀಡಲಾಗುತ್ತದೆ. ಸರ್ಕಾರಿ ಭೂಮಿ ಲಭ್ಯವಿಲ್ಲದ ಕಡೆ ರೈತರು ಭೂಮಿಯನ್ನು ಗುತ್ತಿಗೆಗೆ ನೀಡುವ ಮೂಲಕ ಆದಾಯಗಳಿಸಬಹುದು.

‘ಖಾಸಗಿಯವರು ಸೌರ ಘಟಕಗಳನ್ನು ಆರಂಭಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರ್ಕಾರ ಖರೀದಿಸಿ ಆಯಾ ಫೀಡರ್ಗಳ ವ್ಯಾಪ್ತಿಯ ಕೃಷಿ ಪಂಪ್ಸೆಟ್ಗಳಿಗೆ ಪೂರೈಸಲಿದೆ. ಸ್ಥಳೀಯವಾಗಿ ಉಪಕೇಂದ್ರಗಳ ವ್ಯಾಪ್ತಿಯಲ್ಲೇ ಸೌರ ವಿದ್ಯುತ್ ಉತ್ಪಾದನೆ ಆಗುವುದರಿಂದ ಪ್ರಸರಣ ನಷ್ಟ ಇರುವುದಿಲ್ಲ’ ಎಂದು ಶಿವಶಂಕರ್ ತಿಳಿಸಿದರು.

‘ರೈತರು ಭೂಮಿ ನೀಡಲು ಮುಂದೆ ಬರಲಿ’

‘ಕುಸುಮ್-ಸಿ’ ಯೋಜನೆ ಬಯಲು ಸೀಮೆ ಭಾಗದ ರೈತರಿಗೆ ವರದಾನವಾಗಿದೆ. ಇದನ್ನು ಅನುಷ್ಠಾನಗೊಳಿಸಲು ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡುತ್ತಿದೆ. ಆದರೆ, ಇದಕ್ಕೆ ಭೂಮಿಯ ಕೊರತೆ ಇದೆ. ಸ್ಥಳೀಯ ಶಾಸಕರು ಆಸಕ್ತಿ ವಹಿಸಿ, ಯೋಜನೆ ಜಾರಿಗೆ ಸಹಕಾರ ನೀಡಿದರೆ ರೈತರಿಗೆ ಅನುಕೂಲವಾಗಲಿದೆ. ಸರ್ಕಾರಿ ಭೂಮಿ ಲಭ್ಯವಿಲ್ಲದ ಕಡೆ ರೈತರೇ ಭೂಮಿಯನ್ನು ಗುತ್ತಿಗೆಗೆ ನೀಡುವ ಮೂಲಕ ವಾರ್ಷಿಕವಾಗಿ ಆದಾಯ ಗಳಿಸಬಹುದು. ಹಾಗಾಗಿ, ರೈತರು ಭೂಮಿ ನೀಡಲು ಮುಂದೆ ಬರಬೇಕು.

-ಕೆ.ಜೆ. ಜಾರ್ಜ್, ಇಂಧನ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.