ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ವಿವಿ: ಡಿ.ಎಚ್.ಶಂಕರಮೂರ್ತಿ ಸೇರಿ ಆರು ಮಂದಿಗೆ ಗೌರವ ಡಾಕ್ಟರೇಟ್

ಕುವೆಂಪು ವಿಶ್ವವಿದ್ಯಾಲಯ: 31 ಹಾಗೂ 32ನೇ ಘಟಿಕೋತ್ಸವ ನಾಳೆ
Last Updated 14 ಜೂನ್ 2022, 11:20 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಧಾನಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಸೇರಿದಂತೆ ಆರು ಮಂದಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.

ಶಂಕರಮೂರ್ತಿ ಅವರ ಸಾಮಾಜಿಕ ಸೇವೆ ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿನ ಸೇವೆ ಪರಿಗಣಿಸಿ ನಿವೃತ್ತ ಕುಲಪತಿ ಪ್ರೊ.ಟಿ.ವಿ.ಕಟ್ಟಿಮನಿ, ಬೆಂಗಳೂರಿನ ಸೃಷ್ಟಿ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್‌ ಟೆಕ್ನಾಲಜಿಯ ಮುಖ್ಯಸ್ಥೆ ಗೀತಾ ನಾರಾಯಣನ್, ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಅಂಧರ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷ ಮಹಾಂತೇಶ ಜಿ.ಕಿವಡಸಣ್ಣವರ, ಯೋಗ ಕ್ಷೇತ್ರದಲ್ಲಿನ ಕೆಲಸ ಗುರುತಿಸಿ ಶಿವಮೊಗ್ಗದ ಭ.ಮ.ಶ್ರೀಕಂಠ ಹಾಗೂ ಬಾ.ಸು.ಅರವಿಂದ ಅವರಿಗೆ ಡಾಕ್ಟರೇಟ್ ಕೊಡಲಾಗುತ್ತಿದೆ ಎಂದು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾಭವನದಲ್ಲಿ ಜೂನ್ 16ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ 31 ಹಾಗೂ 32ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಪಾಲ್ಗೊಳ್ಳಲಿದ್ದಾರೆ. ಘಟಿಕೋತ್ಸವದ ಮುಖ್ಯಭಾಷಣ ಮೈಸೂರಿನ ಭಾರತೀಯ ಆಹಾರ ತಾಂತ್ರಿಕ ಸಂಶೋಧನಾಲಯದ ನಿರ್ದೇಶಕಿ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ಮಾಡಲಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT