ಬೆಂಗಳೂರು: ‘ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ, ನೂರೊಂದು ದೇವಾಲಯಗಳನ್ನು ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ (ಎನ್ಐಎಎಸ್) ಸಹಕಾರದಲ್ಲಿ ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿ ಬಳಸಿ ಶೀಘ್ರ ಪತ್ತೆ ಹಚ್ಚಿ ಅನಾವರಣಗೊಳಿಸಲಾಗುವುದು’ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಎನ್ಐಎಎಸ್ ವಿಜ್ಞಾನಿಗಳ ಜೊತೆ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ‘ಲಕ್ಕುಂಡಿಯಲ್ಲಿ 32 ದೇವಾಲಯಗಳು, 28 ಬಾವಿಗಳು ಹಾಗೂ ಏಳು ಇತರೆ ಸ್ಮಾರಕಗಳನ್ನು ಒಳಗೊಂಡಂತೆ ಒಟ್ಟು 70ಕ್ಕೂ ಹೆಚ್ಚು ಸ್ಮಾರಕಗಳನ್ನು ಈಗಾಗಲೇ ಗುರುತಿಸಲಾಗಿದೆ. ಮುಂಬರುವ ಡಿ. 31ರ ಒಳಗೆ 101 ಬಾವಿ ಹಾಗೂ 101 ದೇವಾಲಯಗಳನ್ನು ಅನಾವರಣಗೊಳಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು’ ಎಂದರು.

‘ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ (ಯುನೆಸ್ಕೋ) ಸೇರಿಸಲು ಪ್ರಸ್ತಾವ ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಉದ್ದೇಶದಿಂದ ಪ್ರಾಚ್ಯಾವಶೇಷಗಳ ಅನ್ವೇಷಣೆ ಭಾಗ-1ನ್ನು ನಡೆಸಿ 1,500ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಅನ್ವೇಷಿಸಲಾಗಿದೆ. ಮೇ 2ರಿಂದ ಪ್ರಾಚ್ಯಾವಶೇಷಗಳ ಅನ್ವೇಷಣೆ ಭಾಗ- 2 ನಡೆಸುತ್ತಿದ್ದು, 2ನೇ ಹಂತದಲ್ಲಿ 1,800ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ದೊರೆತಿವೆ. ಎರಡು ಹಂತದ ಪ್ರಾಚ್ಯಾವಶೇಷಗಳನ್ನು ಸೇರಿಸಿ ಜೂನ್ 30ರ ಒಳಗೆ ದಾಖಲೆಯ ರೀತಿಯ 5 ಸಾವಿರಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳನ್ನು ಅನ್ವೇಷಿಸಿ ಅವುಗಳನ್ನು ಬಯಲು ವಸ್ತುಸಂಗ್ರಹಾಲಯದಲ್ಲಿ ಪ್ರದರ್ಶಿಸಲು ಕೂಡಾ ಕ್ರಮ ವಹಿಸಲಾಗಿದೆ’ ಎಂದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಇಸ್ರೊ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ‘ಲಕ್ಕುಂಡಿ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆ ಆಗಬೇಕಿದೆ. ಸ್ಯಾಟಲೈಟ್ ತಂತ್ರಜ್ಞಾನ ಬಳಸಿ ಲಕ್ಕುಂಡಿಯಲ್ಲಿರುವ 101 ಬಾವಿ ಹಾಗೂ 101 ದೇವಾಲಯಗಳನ್ನು ಅನಾವರಣಗೊಳಿಸುವ ಪ್ರಯತ್ನಕ್ಕೆ ಕೈಜೋಡಿಸಲಾಗುವುದು’ ಎಂದರು.

2023ರಿಂದ ಇಲ್ಲಿಯವರೆಗೆ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯ ಚಟುವಟಿಕೆಯ ಕುರಿತು ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದರು. ಸ್ಯಾಟಲೈಟ್ ತಂತ್ರಜ್ಞಾನ ಬಳಕೆ ಕುರಿತು ಎನ್ಐಎಎಸ್ ಪ್ರಾಧ್ಯಾಪಕಿ ಎಂ.ಬಿ. ರಜನಿ ಪ್ರಾತ್ಯಕ್ಷಿಕೆ ನೀಡಿದರು. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಲಹಾ ಸಮಿತಿ ಸದಸ್ಯ ಸಿದ್ದಲಿಂಗೇಶ್ವರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಕೆ.ವಿ. ತ್ರಿಲೋಕಚಂದ್ರ, ಆಯುಕ್ತ ಅಕ್ರಂ ಪಾಷ, ಇಸ್ರೊ ವಿಜ್ಞಾನಿ ಪ್ರೊ. ರಾಮನಗೌಡ ನಾಡಗೌಡರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.