ಲಕ್ಷ್ಮೇಶ್ವರ: ‘ರಾಜ್ಯದ ಮುಖ್ಯಮಂತ್ರಿ ಸ್ಥಾನ ಡಿ.ಕೆ. ಶಿವಕುಮಾರ್ ಅವರಿಗೆ ಸಿಕ್ಕಿದ್ದು ನಮಗೆಲ್ಲ ಸಂತಸ ತಂದಿದೆ. ಸಿದ್ದರಾಮಯ್ಯನವರು ಆಡಳಿತ ನಡೆಸಿದಂತೆ ಇವರೂ ಕೂಡ ಉತ್ತಮ ಆಡಳಿತ ನೀಡುತ್ತಾರೆ’ ಎಂದು ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ ಹೇಳಿದರು.

ಡಿಕೆಶಿ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅವರು ನಂಬಿರುವ ತಾಲ್ಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದ ವೀರಗಂಗಾಧರ ಶಿವಾಚಾರ್ಯ ಸ್ವಾಮೀಜಿ (ಅಜ್ಜಯ್ಯ) ಗದ್ದುಗೆಗೆ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ ನಂತರ ನಡೆದ ಸಂಭ್ರಮಾಚರಣೆ ನಡೆಸಿದರು.

‘ಶಿವಕುಮಾರ್ ಅವರು ಬಂಡೆಯಂತೆ ನಿಂತು ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶಿವಕುಮಾರ್ ಅವರು ದೇವರ ಮೇಲೆ ಅಪಾರ ನಂಬಿಕೆ ಇಟ್ಟಿದ್ದು ಅದರಲ್ಲೂ ಮುಕ್ತಿಮಂದಿರದ ವೀರಗಂಗಾಧರ ಶಿವಾಚಾರ್ಯರ ಮೇಲೆ ಅಪಾರ ಭಕ್ತಿ ಹೊಂದಿದ್ದಾರೆ. ಶ್ರೀಗಳ ಆಶೀರ್ವಾದದ ಫಲವಾಗಿ ಮುಖ್ಯಮಂತ್ರಿಗಳಾಗಿದ್ದಾರೆ’ ಎಂದು ಹೇಳಿದರು.

ಶಿವಕುಮಾರ್ ಅವರು ಈಚೆಗೆ ಮುಕ್ತಿಮಂದಿರಕ್ಕೆ ಭೇಟಿ ನೀಡಿ ಪಟ್ಟಾಧ್ಯಕ್ಷ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರ ಮಾರ್ಗದರ್ಶನದಲ್ಲಿ ವಿಶೇಷ ಪೂಜೆ, ಅಭಿಷೇಕ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಮುಕ್ತಿಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ಹೇಳಿದರು.

ಲಕ್ಷ್ಮೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಆರ್. ಕೊಪ್ಪದ, ಜಯಕ್ಕ ಕಳ್ಳಿ, ಶರಣು ಗೋಡಿ, ಮುತ್ತಣ್ಣ ಗಡೆಪ್ಪನವರ, ಸುಭಾಸ ಓದುನವರ, ಸೋಮನಗೌಡ್ರ ಪಾಟೀಲ, ಬಸವರಾಜ ಓದುನವರ, ಪರಮೇಶ ಲಮಾಣಿ, ನಾಗರಾಜ ಚಿಂಚಲಿ, ಕಿರಣ ನವಲೆ, ಮೌನೇಶ ಬಾಲೇಹೊಸೂರು, ಬಸವರೆಡ್ಡಿ ಹನುಮರೆಡ್ಡಿ, ಜಯಣ್ಣ, ಶಿವಣ್ಣ ಕಲಕೋಟಿ, ರಾಮಣ್ಣ ರಿತ್ತಿ, ಛಾಯಪ್ಪ ಬಸಾಪೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-23-1473528109

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.