ಬೆಂಗಳೂರು: ‘ಬೆಂಗಳೂರು–ಮೈಸೂರು ರಸ್ತೆಯಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪಕ್ಕೆ ಗುರಿಯಾಗಿರುವ ತರುಣ ತಾನು ಮಾಡಿರುವ ತಪ್ಪಿನ ಅರಿವಾಗಿ ಸಮುದಾಯ ಸೇವೆ ಮಾಡುತ್ತೇನೆ ಎಂಬ ಪಶ್ಚಾತ್ತಾಪದ ಇರಾದೆ ವ್ಯಕ್ತಪಡಿಸಿರುವುದನ್ನು ಪರಿಗಣಿಸಲಾಗುವುದು’ ಎಂದು ತಿಳಿಸಿರುವ ಹೈಕೋರ್ಟ್ ಈ ಕುರಿತ ಆದೇಶವನ್ನು ಕಾಯ್ದಿರಿಸಿದೆ.

‘ನನ್ನ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಸಿ.ವಿ.ರಾಮನ್ ನಗರದ ಬಿ.ಆರ್.ಚಿರಂತ್ (27) ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಲ್ಯಾಂಬೊರ್ಗಿನಿ ಕಾರಿನಲ್ಲಿ ಹೋಗಿ ರಸ್ತೆಯ ಕಸ ಗುಡಿಸಿ ಪುನಃ ಅದೇ ಕಾರಿನಲ್ಲಿ ವಾಪಸು ಬನ್ನಿ’ ಎಂದು ಛೇಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ರಜತ್, ‘ಚಿರಂತ್ ಯಾವುದೇ ಅಪರಾಧ ಮಾಡಿಲ್ಲ. ಆದರೂ, ಅವರನ್ನು ಅಪರಾಧಿ ಎಂದು ತೋರಿಸಲಾಗಿದೆ. ಆದಾಗ್ಯೂ, ಅವರಿಗೀಗ ಅಪರಾಧ ಪ್ರಜ್ಞೆಯ ಅರಿವಾಗಿದ್ದು, ಸಮುದಾಯ ಸೇವೆ ಮಾಡುವುದಾಗಿ ತಿಳಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸದಂತೆ ಶಾಲಾ ಮಕ್ಕಳಲ್ಲಿ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಇರಾದೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.

ಇದಕ್ಕೆ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಲ್ಯಾಂಬೊರ್ಗಿನಿ ಕಾರನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಚಾಲನೆ ಮಾಡಿದ ವ್ಯಕ್ತಿ ಶಾಲೆಯಲ್ಲಿ ಸಂಚಾರ ನಿಯಮದ ಪಾಠ ಮಾಡುವುದೇ’ ಎಂದು ಅಚ್ಚರಿ ವ್ಯಕ್ತಪಡಿಸಿದರಲ್ಲದೆ, ‘ಇವರು ಗಿಡಗಳನ್ನು ನೆಡುವುದೇ ಸೂಕ್ತ’ ಎಂದರು.

ಅರ್ಜಿದಾರರ ಮತ್ತು ಪ್ರಾಸಿಕ್ಯೂಷನ್ ಪರ ಮನವಿ ಆಲಿಸಿದ ನ್ಯಾಯಮೂರ್ತಿಗಳು, ‘ಅರ್ಜಿದಾರ ಚಿರಂತ್ಗೆ ಪಶ್ಚಾತ್ತಾಪವಾಗಿದೆ ಎಂದು ಅವರ ಪರ ವಕೀಲರು ಹೇಳುತ್ತಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಲ್ಲಿ (ಬಿಎನ್ಎಸ್ಎಸ್) 10 ಬಗೆಯ ಸಮುದಾಯ ಸೇವೆಗಳಿವೆ. ಇವರು ಸಂಚಾರ ನಿಯಮ ಉಲ್ಲಂಘಿಸಿರುವ ಕಾರಣ ಶಾಲಾ ಮಕ್ಕಳಿಗೆ ಅರಿವು ಮೂಡಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಯಾವ ರೀತಿಯ ಸಮುದಾಯ ಸೇವೆ ಮಾಡಬೇಕು ಎಂಬುದನ್ನು ಪರಿಶೀಲಿಸಿ ಆದೇಶಿಸುತ್ತೇನೆ’ ಎಂದು ತಿಳಿಸಿ ಆದೇಶ ಕಾಯ್ದಿರಿಸಿದರು.

ಪ್ರಕರಣವೇನು?: ಹಾನಿಕಾರಕ ಸೈಲೆನ್ಸರ್ (ಶಬ್ದ ಶಾಮಕ) ಅಳವಡಿಸಿಕೊಂಡ ಲ್ಯಾಂಬೊರ್ಗಿನಿ ಕಾರನ್ನು ಬೆಂಗಳೂರಿನ ಕೆಂಗೇರಿ ಪ್ರದೇಶದಲ್ಲಿ ಮೈಸೂರು ರಸ್ತೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗುತ್ತಿದ್ದ ವಿಡಿಯೊ ತುಣುಕನ್ನು ‘ಸನಾತನ’ ಎಂಬ ಎಕ್ಸ್ ಖಾತೆಯಲ್ಲಿ ವೀಕ್ಷಿಸಿರುವುದಾಗಿ ಕರ್ತವ್ಯ ನಿರತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆರ್.ರಾಮಸ್ವಾಮಿ ದೂರು ನೀಡಿದ್ದರು.

ಇದರ ಅನ್ವಯ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ, ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 281 ಮತ್ತು ಭಾರತೀಯ ಮೋಟಾರು ವಾಹನಗಳ ಕಾಯ್ದೆಯ ಕಲಂ 120 ಮತ್ತು 177ರ ಅಡಿ ಚಿರಂತ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.