ಬೆಂಗಳೂರು: ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಸಿಬ್ಬಂದಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರಿನಲ್ಲಿರುವ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸೂಚಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯವು (ಇ.ಡಿ), ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿ ಮತ್ತು ಮೈಸೂರು ತಾಲ್ಲೂಕು ಕಚೇರಿಯಲ್ಲಿ ಈಚೆಗೆ ಶೋಧ ಕಾರ್ಯ ನಡೆಸಿತ್ತು.

ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಕೆಂಗೇರಿ ನಿವಾಸದಲ್ಲೂ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.

ವಿಚಾರಣೆ ಪೂರ್ಣಗೊಳಿಸಿದ್ದ ಇ.ಡಿ ಅಧಿಕಾರಿಗಳು ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು.
.ಮುಡಾ ಹಗರಣ: ಮೇಲ್ಮನವಿ ಸಲ್ಲಿಸಿದ ಸಿ.ಎಂ.ಮುಡಾ ಪ್ರಕರಣ: ದಾಖಲೆ ಜಾಲಾಡಿದ ಇ.ಡಿ.MUDA Scam: ಮುಡಾ ಕಚೇರಿಯಲ್ಲಿ ಮುಂದುವರಿದ ಇ.ಡಿ ಶೋಧ.ಮುಡಾ ಹಗರಣದ ಎಲ್ಲ ದಾಖಲೆಗಳು ಭೈರತಿ ಸುರೇಶ್ ಮನೆಯಲ್ಲಿವೆ: ಶಾಸಕ ಶ್ರೀವತ್ಸ ಆರೋಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.