ಬೆಂಗಳೂರು: ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011ರ ಸಾಂವಿಧಾನಿಕ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ತಕ್ಷಣವೇ ಹೆಚ್ಚುವರಿ ವಿಶೇಷ ನ್ಯಾಯಾಲಯಗಳನ್ನು ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ಸಂಬಂಧ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳನ್ನು ವಿಲೇವಾರಿ ಮಾಡಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ಬಿ.ಎ. ಪಾಟೀಲ ಅವರಿದ್ದ ವಿಭಾಗೀಯ ಪೀಠ, ವಿಶೇಷವಾಗಿ ಎಲ್ಲಾ ಜಿಲ್ಲೆಗಳಲ್ಲೂ ನ್ಯಾಯಾಲಯ ತೆರೆಯುವಂತೆ ತಿಳಿಸಿದೆ.

‘ಬೆಂಗಳೂರು ನಗರದಲ್ಲಿ ಮಾತ್ರ ಭೂಕಬಳಿಕೆ ವಿಶೇಷ ನ್ಯಾಯಾಲಯ ಇದೆ. ಈ ಕಾಯ್ದೆಯಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ರೈತರು ರಾಜಧಾನಿಗೇ ಬರಬೇಕಾದ ಸ್ಥಿತಿ ಇದೆ. ಇದು ಬಡ ರೈತರಿಗೆ ಕಷ್ಟವಾಗಿದೆ. ಅಲ್ಲದೇ ಈ ಕಾಯ್ದೆಯಡಿ 7,800 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 4,400 ಪ್ರಕರಣಗಳು ವಿಚಾರಣೆ ಬಾಕಿ ಇವೆ. ಹೀಗಾಗಿ ಹೆಚ್ಚುವರಿ ನ್ಯಾಯಾಲಯಗಳನ್ನು ಜಿಲ್ಲಾ ಮಟ್ಟದಲ್ಲಿ ತೆರೆಯುವುದು ಸೂಕ್ತ’ ಎಂದು ಪೀಠ ಅಭಿಪ್ರಾಯಪಟ್ಟಿತು.

ಸಕಾರಣವಿಲ್ಲದೆ ಭೂ ಕಬಳಿಕೆ ವಿಶೇಷ ನ್ಯಾಯಾಲಯಗಳಿಗೆ ಪ್ರಕರಣಗಳನ್ನು ವರ್ಗಾಯಿಸಬಾರದು. ಈ ಆದೇಶವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣಗಳನ್ನು ಪ್ರತ್ಯೇಕವಾಗಿ ನಿಭಾಯಿಸುವಂತೆ ವಿಶೇಷ ನ್ಯಾಯಾಲಯಕ್ಕೂ ಪೀಠ ನಿರ್ದೇಶನ ನೀಡಿತು.

‘ಈ ಕಾಯ್ದೆಯು ಸಂವಿಧಾನದ 14, 20 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸಿದೆ’ ಎಂದು ಆರೋಪಿಸಿ ಹೈಕೋರ್ಟ್‌ಗೆ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.