ಬೆಂಗಳೂರು: ಮೃತ ರೈತರ ಹೆಸರಿನಲ್ಲೇ 52 ಲಕ್ಷ ಪಹಣಿಗಳಿದ್ದು, ಅವರ ಕಾನೂನುಬದ್ಧ ವಾರಸುದಾರರಿಗೆ ಪೌತಿಖಾತೆ ಮಾಡಿಕೊಡಲು ಪ್ರತಿ ಜಿಲ್ಲೆಯಲ್ಲೂ ಅಭಿಯಾನ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಪಿ.ಎಂ ಕಿಸಾನ್, ಹನಿ ನೀರಾವರಿ ಹಾಗೂ ಯಂತ್ರೋಪಕರಣ ಖರೀದಿ ಸಬ್ಸಿಡಿ ನೀಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರದ ಈ ಆದೇಶದಿಂದ ಮೃತ ರೈತರ ಕುಟುಂಬಗಳಿಗೆ ತೊಂದರೆಯಾಗುತ್ತದೆ. ಹಾಗಾಗಿ, ಕಂದಾಯ ಇಲಾಖೆ ಅಧಿಕಾರಿಗಳೇ ರೈತರ ಮನೆ ಬಾಗಿಲಿಗೆ ತೆರಳಿ ಪೌತಿಖಾತೆ ಮಾಡಿಕೊಡಲಿದ್ದಾರೆ. ಈಗಾಗಲೇ 2.30 ಲಕ್ಷ ಪಹಣಿಗಳನ್ನು ಖಾತೆ ಮಾಡಲಾಗಿದೆ. ಪ್ರಗತಿ ಸಾಧಿಸುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಪ್ರತಿ ಪ್ರಕರಣಕ್ಕೂ ₹6 ನೀಡಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ನನ್ನ ಭೂಮಿ’ ಯೋಜನೆಯಲ್ಲಿ ದರ್ಖಾಸ್ತು ಪೋಡಿಗಾಗಿ ಎಂಟು ತಿಂಗಳಲ್ಲಿ 1,09,000 ಜಮೀನುಗಳ ಅಳತೆ ಮಾಡಲಾಗಿದೆ. ಡಿಸೆಂಬರ್ ಒಳಗಾಗಿ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ನಿಗದಿ ಮಾಡಲಾಗಿದೆ. ಇದರಿಂದ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.

ಹಾಡಿ, ಹಟ್ಟಿ, ತಾಂಡಾ, ಮಜರೆ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, 1.62 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಅರ್ಹತೆ ಇದ್ದರೂ ಬಿಟ್ಟುಹೋಗಿದ್ದ 4,250 ಅರ್ಹ ಜನವಸತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಡಿಸೆಂಬರ್ ಒಳಗೆ ಎಲ್ಲ ಗ್ರಾಮಗಳಿಗೂ ಕಂದಾಯ ಸ್ಥಾನಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಒಳ ಹರಿವು ಉತ್ತಮವಾಗಿದ್ದರೂ ಜಲಾಶಯಗಳ ನೀರಿನ ನಿರ್ವಹಣೆ ಬಗ್ಗೆ ಎಚ್ಚರವಹಿಸಬೇಕು. ಮುಂದಿನ ದಿನಗಳಲ್ಲಿ ಮಳೆ ಕುಠಿತವಾದರೂ ನೀರಿನ ಕೊರತೆಯಾಗದಂತೆ ಜಿಲ್ಲಾಧಿಕಾರಿಗಳು ನಿಗಾವಹಿಸಬೇಕು
ಕೃಷ್ಣ ಬೈರೇಗೌಡ ಕಂದಾಯ ಸಚಿವ

ಹತ್ತೂವರೆ ಗಂಟೆ ನಿರಂತರ ಸಭೆ

ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10ಕ್ಕೆ ಆರಂಭವಾದ ಎಲ್ಲಾ ಜಿಲ್ಲೆಗಳ ತಿಂಗಳ ಪ್ರಗತಿ ಪರಿಶೀಲನಾ ಸಭೆ ರಾತ್ರಿ 8.30ಕ್ಕೆ ಮುಕ್ತಾಯವಾಯಿತು. ಸತತ ಹತ್ತೂವರೆ ಗಂಟೆ ನಡೆದ ಸಭೆಯಲ್ಲಿ ದರ್ಖಾಸ್ತು ಪೋಡಿ ಪೌತಿಖಾತೆ ಕಂದಾಯ ಗ್ರಾಮ ಘೋಷಣೆ ಭೂ ಸುರಕ್ಷಾ ಸೇರಿದಂತೆ ಸರ್ಕಾರದ ಎಲ್ಲಾ ಅಭಿಯಾನಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳಿಗೆ ಮುಂದಿನ ಗುರಿ ನಿಗದಿ ಮಾಡುವ ಜತೆಗೆ ಸವಾಲುಗಳ ಕುರಿತೂ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.