ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 3ನೇ ಸೆಮಿಸ್ಟರ್ ಪ್ರವೇಶಕ್ಕೆ ಜೂನ್ 22ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ.

ಮೊದಲು ಆನ್‌ಲೈನ್ ಮೂಲಕ ನಡೆಸಲು ನಿರ್ಧರಿಸಲಾಗಿತ್ತು. ವಿವಿಧ ಕಾರಣಗಳಿಂದ ಪರೀಕ್ಷೆಯನ್ನು ಆಫ್‌ಲೈನ್ ಸ್ವರೂಪದಲ್ಲಿ ಹಿಂದಿನ ವರ್ಷಗಳಲ್ಲಿ ನಡೆಸಿದಂತೆಯೇ ಒಎಂಆರ್ ಉತ್ತರ ಪತ್ರಿಕೆಯ ಮಾದರಿಯಲ್ಲಿ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಪರೀಕ್ಷೆಯನ್ನು ಬಾಗಲಕೋಟೆ, ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಉಡುಪಿ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಾತ್ರ ನಡೆಸಲಾಗುವುದು. ಬೇರೆ ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡವರು ಪ್ರಾಧಿಕಾರದ ವೆಬ್‌ಸೈಟಿನ ಲಿಂಕ್ ಮೂಲಕ ಮೇ 24ರ ಬೆಳಿಗ್ಗೆ 11ರಿಂದ 27ರ ರಾತ್ರಿ 11.59ರ ಒಳಗೆ ಬದಲಿ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.