ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ಪ್ರಭಾವಿಗಳ ಕೈವಾಡದ ಬಗ್ಗೆ ತನಿಖೆಗೆ ವಕೀಲರ ಆಗ್ರಹ

Last Updated 4 ಮೇ 2022, 6:44 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಪ್ರಭಾವಿ ವ್ಯಕ್ತಿಗಳೂ ಭಾಗಿಯಾಗಿರುವ ಅನುಮಾನವಿದ್ದು, ಈ ನಿಟ್ಟಿನಲ್ಲೂ ತನಿಖೆ ಕೈಗೊಂಡು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ವಕೀಲರು ಆಗ್ರಹಿಸಿದ್ದಾರೆ.

ಎ.ಪಿ.ರಂಗನಾಥ್, ಕೆ.ಎನ್.ಜಗದೀಶ್ ಕುಮಾರ್ ಹಾಗೂ ಬಾಲನ್ ಅವರನ್ನೊಳಗೊಂಡ ವಕೀಲರ ತಂಡವು ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ.

'545 ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸುಮಾರು ₹500 ಕೋಟಿಯ ವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೂ ಹಣ ಸಂದಾಯವಾಗಿರುವ ಅನುಮಾನವಿದೆ. ಹೀಗಾಗಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಬೇಕು' ಎಂದು ಒತ್ತಾಯಿಸಿದ್ದಾರೆ.

'ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮವೇ ನಡೆದಿಲ್ಲ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ. ಆ ಮೂಲಕ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಸಿಐಡಿ ಎಸ್.ಪಿ.ರವಿ ಡಿ. ಚನ್ನಣ್ಣನವರ್
ಹಗರಣದ ಪ್ರಮುಖ ಆರೋಪಿಯಾಗಿರುವ ದಿವ್ಯಾ ಹಾಗರಗಿ ಜೊತೆ ತೆಗೆಸಿಕೊಂಡಿರುವ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅವರೂ ಅಕ್ರಮದಲ್ಲಿ ಭಾಗಿಯಾಗಿರುವ ಅನುಮಾನ ಮೂಡಿದೆ. ಹೀಗಾಗಿ ಇವರನ್ನೂ ವಿಚಾರಣೆಗೆ ಕರೆಸಿ ಸತ್ಯಾಸತ್ಯತೆ ಹೊರಗೆಡಹಬೇಕು' ಎಂದು ಆಗ್ರಹಿಸಿದ್ದಾರೆ.

'ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್‌ಪಾಲ್ ಅವರೂ ಅಕ್ರಮದಲ್ಲಿ ಪಾಲ್ಗೊಂಡಿರುವ ಶಂಕೆ ಇದೆ. ಅವರನ್ನೂ ವಿಚಾರಣೆಗೆ ಒಳಪಡಿಸಿ' ಎಂದೂ ಒತ್ತಾಯಿಸಿದ್ದಾರೆ.

ಶೇ 30ರಷ್ಟು ಮಂದಿ ಅಕ್ರಮದಲ್ಲಿ ಭಾಗಿ ಆಗಿರಬಹುದು. ಆದರೆ ಇನ್ನುಳಿದವರು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದಾರೆ ಎಂದು ಹೇಳಿದರು.

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT