ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಮಾ ವ್ಯಾಪ್ತಿಗೆ ವಕೀಲರ ಪೋಷಕರು: ಪಿಐಎಲ್‌ ಹಿಂಪಡೆಯಲು ಅನುಮತಿ

Published 23 ಆಗಸ್ಟ್ 2023, 16:02 IST
Last Updated 23 ಆಗಸ್ಟ್ 2023, 16:02 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರ ಸರ್ಕಾರ ರಚಿಸಲು ಉದ್ದೇಶಿಸಿರುವ ವಿಮಾ ಯೋಜನೆ ವ್ಯಾಪ್ತಿಗೆ ವೃತ್ತಿನಿರತ ವಕೀಲರ ಪೋಷಕರನ್ನೂ ಒಳಪಡಿಸಲು ನಿರ್ದೇಶಿಸಬೇಕು‘ ಎಂದು ಕೋರಲಾದ ಅರ್ಜಿಯನ್ನು ಅರ್ಜಿದಾರರು ಹಿಂಪಡೆದಿದ್ದಾರೆ.

‘ಈ ಸಂಬಂಧ ಭಾರತೀಯ ವಕೀಲರ ಪರಿಷತ್ತು (ಬಿಸಿಐ) ಮತ್ತು ಕರ್ನಾಟಕ ವಕೀಲರ ಪರಿಷತ್ತಿಗೆ (ಕೆಬಿಸಿ) ನಿರ್ದೇಶನ ನೀಡಬೇಕು‘ ಎಂದು ಕೋರಿ ವಕೀಲ ಎಲ್.ರಮೇಶ್ ನಾಯಕ್ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ಅರ್ಜಿದಾರರು ಸೂಕ್ತವಾದ ರೀತಿಯಲ್ಲಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿಲ್ಲ. ಹಾಗಾಗಿ, ಸಮರ್ಪಕ ಹಾಗೂ ಸಮಗ್ರವಾದ ಅರ್ಜಿ ಸಲ್ಲಿಸಿ‘ ಎಂದು ಅರ್ಜಿದಾರರಿಗೆ ನಿರ್ದೇಶಿಸಿತು. ಇದಕ್ಕೆ, ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರು ಅನುಮತಿ ನೀಡುವಂತೆ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ಹಿಂಪಡೆಯಲು ಅನುಮತಿ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT