ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 15ರ ಬಳಿಕ ವಿಪಕ್ಷದ ನಾಯಕರ ಆಯ್ಕೆ: ಬೊಮ್ಮಾಯಿ

Published 10 ಆಗಸ್ಟ್ 2023, 17:04 IST
Last Updated 10 ಆಗಸ್ಟ್ 2023, 17:04 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಗಳ ಆಯ್ಕೆ ಕುರಿತು ಇದೇ 15ರ ನಂತರ ನಿರ್ಧಾರ ಕೈಗೊಳ್ಳುವುದಾಗಿ ಪಕ್ಷದ ವರಿಷ್ಠರು ತಿಳಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಗುರುವಾರ ಮಾತನಾಡಿದ ಅವರು, ‘ಸಂಸತ್‌ ಅಧಿವೇಶನದ ವೇಳೆ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆಗ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದೇನೆ. ಆಗ ವರಿಷ್ಠರಿಂದ ಶೀಘ್ರ ಆಯ್ಕೆಯ ಭರವಸೆ ದೊರೆತಿದೆ’ ಎಂದರು.

‘ಲೋಕಸಭೆ ಚುನಾವಣೆಯ ಸಿದ್ದತೆ, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಸರ್ಕಾರದ ಬಗ್ಗೆ ಜನರ ಅಭಿಪ್ರಾಯ, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸುವ ಕುರಿತು ಚರ್ಚೆ ಮಾಡಿದ್ದೇವೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಆರಂಭಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT