ಮೈಸೂರು: ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಇಲ್ಲಿ ಹೇಳಿದರು.

‘ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ತಯಾರಿ ನಡೆದಿದೆ. ದೆಹಲಿಯಿಂದ ನನಗೆ ಲಭಿಸಿರುವ ಮಾಹಿತಿಯಂತೆ ಈ ಮಾತು ಹೇಳಿದ್ದೇನೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿಜೆಪಿಯಲ್ಲಿ ಮೊದಲಿನಿಂದಲೂ ಚರ್ಚೆ ನಡೆಯುತ್ತಾ ಇದೆ. ಆ ಚರ್ಚೆ ಈಗ ಇನ್ನಷ್ಟು ಗಟ್ಟಿಗೊಂಡಿದೆ’ ಎಂದು ತಿಳಿಸಿದರು.

ಗೆಲ್ಲುವ ವಿಶ್ವಾಸ: ‘ಶಿರಾ ಮತ್ತು ಆರ್.ಆರ್.ನಗರದಲ್ಲಿ ನಾವು ಗೆಲ್ಲುವ ಸಾಧ್ಯತೆ ಇದೆ. ನನಗೆ ದೊರೆತ ಮಾಹಿತಿಯಂತೆ ಮತಗಳು ಕಾಂಗ್ರೆಸ್ ಪರವಾಗಿ ಬಿದ್ದಿವೆ. ಶಿರಾದಲ್ಲಿ ಕಳೆದ ಸಲ ಅಪಪ್ರಚಾರದ ಕಾರಣ ನಮ್ಮ ಅಭ್ಯರ್ಥಿ ಸೋತಿದ್ದರು. ಈ ಸಲ ಜನರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ’ ಎಂದರು.

ಶಾಲೆಗಳ ಆರಂಭ ಬೇಡ: ‘ಈ ವರ್ಷ ಶಾಲೆಗಳನ್ನು ಆರಂಭಿಸುವುದುಬೇಡ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆನ್‌ಲೈನ್‌ನಲ್ಲೇ ಪಾಠ ಮುಂದುವರಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸಲಿ. ಕೊರೊನಾದಿಂದ ಸಂಪೂರ್ಣವಾಗಿ ಮುಕ್ತವಾದ ಬಳಿಕವೇ ಶಾಲೆಗಳು ಪ್ರಾರಂಭವಾಗಲಿ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.