ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಮತದಾನದ ದಿನ ವೇತನ ಸಹಿತ ರಜೆ

ರಾಜ್ಯದಲ್ಲಿ ಏ.26 ಮತ್ತು ಮೇ 7ರಂದು ಲೋಕಸಭಾ ಚುನಾವಣೆ ನಡೆಯಲಿದೆ
Published 25 ಮಾರ್ಚ್ 2024, 15:51 IST
Last Updated 25 ಮಾರ್ಚ್ 2024, 15:51 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗಲು ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ಭಾರತ ಚುನಾವಣಾ ಆಯೋಗವು ಘೋಷಣೆ ಮಾಡಿದೆ.

ರಾಜ್ಯದಲ್ಲಿ ಎರಡ ಹಂತದಲ್ಲಿ ಅಂದರೆ ಏ.26 ಮತ್ತು ಮೇ 7ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆಗೆ ಮೇ 7ರಂದು ಉಪಚುನಾವಣೆ ನಿಗದಿಯಾಗಿದೆ.

ಆಯಾ ಕ್ಷೇತ್ರಗಳ ಮತದಾರರು ಅಂದು ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ಅಂಗಡಿ, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನಸಹಿತ ರಜೆ ನೀಡಬೇಕು ಎಂದು ಆದೇಶ ನೀಡಿದೆ. ತಪ್ಪಿದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳುವುದಾಗಿ ಆಯೋಗ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT