ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ಲೀಲ ವಿಡಿಯೊ ಇಟ್ಟುಕೊಂಡರೂ ಕಾನೂನು ಕ್ರಮ: ಡಿಲೀಟ್ ಮಾಡಿ ಎಂದು SIT ಎಚ್ಚರಿಕೆ!

ವಿಡಿಯೊ ಸಂಗ್ರಹಿಸಿಟ್ಟುಕೊಂಡಿದ್ದು ಪತ್ತೆಯಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
Published 6 ಮೇ 2024, 14:41 IST
Last Updated 6 ಮೇ 2024, 14:41 IST
ಅಕ್ಷರ ಗಾತ್ರ

ಬೆಂಗಳೂರು: ‘ಅಶ್ಲೀಲ ವಿಡಿಯೊ, ಫೋಟೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಳ್ಳುವುದು ಸಹ ಅಪರಾಧ. ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದು ಪತ್ತೆಯಾದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಸ್‌ಐಟಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಪಟ್ಟ ಅಶ್ಲೀಲ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದರಿಂದ ಸಂತ್ರಸ್ತೆಯರ ಗೌರವಕ್ಕೆ ಧಕ್ಕೆ ಉಂಟಾಗಿತ್ತು. ಇದೇ ಕಾರಣಕ್ಕೆ, ವಿಡಿಯೊ ಹಂಚಿಕೊಳ್ಳದಂತೆ ಎಸ್‌ಐಟಿ ಭಾನುವಾರ ಎಚ್ಚರಿಕೆ ನೀಡಿತ್ತು.

ಸೋಮವಾರವೂ ಮತ್ತೊಂದು ಪತ್ರಿಕಾ ಪ್ರಕಟಣೆ ನೀಡಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್, ‘ಅಶ್ಲೀಲ ವಿಡಿಯೊ, ಫೋಟೊ ಹಾಗೂ ಧ್ವನಿವರ್ಧಕ ಹಂಚಿಕೊಳ್ಳುವುದಷ್ಟೇ ಅಲ್ಲದೇ ಇಟ್ಟುಕೊಳ್ಳುವುದು ಸಹ ಅಪರಾಧ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕ್ರಮ ಜರುಗಿಸಲು ಅವಕಾಶವಿದೆ’ ಎಂದಿದ್ದಾರೆ.

‘ಅಶ್ಲೀಲ ವಿಡಿಯೊ ಹಾಗೂ ಫೋಟೊಗಳನ್ನು ಇಟ್ಟುಕೊಳ್ಳುವವರನ್ನು ಪತ್ತೆ ಮಾಡುವುದು ಸುಲಭ. ಯಾರಾದರೂ ಅಂಥ ವಿಡಿಯೊ ಹಾಗೂ ಫೋಟೊ ಇಟ್ಟುಕೊಂಡಿದ್ದರೆ ‘ಅಳಿಸಿ (ಡಿಲೀಟ್)’ ಹಾಕುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT