ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್?
ಹೈಕಮಾಂಡ್ ತಮ್ಮ ಬೆನ್ನಿಗೆ ನಿಲ್ಲಲಿದೆ ಎಂಬ ಬಲವಾದ ವಿಶ್ವಾಸದಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದೂ ಗೊತ್ತಾಗಿದೆ. ತಮ್ಮ ವಿರುದ್ಧ ಕೇಳಿ ಬಂದಿರುವ ಮುಡಾ ಪ್ರಕರಣದ ಬಗ್ಗೆ ಹೈಕಮಾಂಡ್ ನಾಯಕರಿಗೆ ಮುಖ್ಯಮಂತ್ರಿ ಸಂಪೂರ್ಣ ಮಾಹಿತಿ ನೀಡಿದ್ದಾರೆ. ತಾನು ಯಾವುದೇ ರೀತಿಯಲ್ಲೂ ಅಕ್ರಮ ಎಸಗಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿ ಬಂದಿದ್ದಾರೆ. ಈ ವಿಚಾರದಲ್ಲಿ ಕಾನೂನು ಹೋರಾಟ ನಡೆಸುವಂತೆ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡಾ ಸಲಹೆ ನೀಡಿದ್ದಾರೆ. ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ಕಾನೂನು ಹೋರಾಟದಲ್ಲಿ ಯಶಸ್ವಿಯಾಗುವ ವಿಶ್ವಾಸವನ್ನು ಹೈಕಮಾಂಡ್ ನಾಯಕರ ಬಳಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ ಎಂದೂ ಗೊತ್ತಾಗಿದೆ.