ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್‌ ಚುನಾವಣೆ | ಕಾಂಗ್ರೆಸ್‌ಗೆ ಅನುಕೂಲಕರ: ಸಿದ್ದರಾಮಯ್ಯ ಹೇಳಿಕೆ

Published 8 ಸೆಪ್ಟೆಂಬರ್ 2023, 15:49 IST
Last Updated 8 ಸೆಪ್ಟೆಂಬರ್ 2023, 15:49 IST
ಅಕ್ಷರ ಗಾತ್ರ

ಬೆಂಗಳೂರು: ‘ಶಿಕ್ಷಕರು ಮತ್ತು ಪದವೀಧರರು ನಾಡಿನ ಅಭಿವೃದ್ದಿ ಪರವಾಗಿ ಇದ್ದಾರೆ. ಆದ್ದರಿಂದ ಇವರೆಲ್ಲಾ ನಮ್ಮ ಪರವಾಗಿ ಇರುವುದರಿಂದ ವಿಧಾನಪರಿಷತ್‌ ಚುನಾವಣೆಯಲ್ಲಿ ಅನುಕೂಲಕರ ವಾತಾವರಣವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ವಿಧಾನಪರಿಷತ್‌ ಚುನಾವಣೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನಡೆದ ಟಿಕೆಟ್‌ ಆಕಾಂಕ್ಷಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಟಿಕೆಟ್‌ ಆಕಾಂಕ್ಷಿಗಳು ಶಿಕ್ಷಕರು ಮತ್ತು ಪದವೀಧರ ಸದಸ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು ಅವರ ಮಾತು ಮತ್ತು ಬೇಡಿಕೆಗಳನ್ನು ಕೇಳಿ ನಮಗೆ ತಿಳಿಸಬೇಕು. ನಾಡಿನ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದಕ್ಕಾಗಿ ಪಕ್ಷ ಮತ್ತು ಸರ್ಕಾರ ಶ್ರಮಿಸಲಿದೆ. ಇದನ್ನು ಮತದಾರರಿಗೆ ಸರಿಯಾಗಿ ಅರ್ಥ ಮಾಡಿಸಬೇಕು’ ಎಂದು ಸಲಹೆ ನೀಡಿದರು.

‘ಟಿಕೆಟ್ ಆಕಾಂಕ್ಷಿಗಳು ಮತ್ತು ಎಲ್ಲ ಶಾಸಕರು ಮತ್ತು ಜಿಲ್ಲಾ ಪದಾಧಿಕಾರಿಗಳ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಹೆಸರನ್ನು ಘೋಷಿಸುತ್ತೇವೆ. ಟಿಕೆಟ್‌ ಯಾರಿಗೇ ಸಿಕ್ಕರೂ ಒಗ್ಗಟ್ಟಿನಿಂದ ಕೆಲಸ ಮಾಡಿ’ ಎಂದೂ ಹೇಳಿದರು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಸಚಿವ ರಾಮಲಿಂಗಾರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT