ಬೋಸ್ಟನ್ (ಅಮೇರಿಕ): ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಾಸನ ಸಭೆಗಳ ಹಾಗೂ ಜನಪ್ರತಿನಿಧಿಗಳ ಪಾತ್ರ ಅತ್ಯಂತ ಮಹತ್ತರವಾದುದು ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.

ಅಮೇರಿಕದ ಬೋಸ್ಟನ್ ನಗರದಲ್ಲಿ ‘ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ’ ಹಾಗೂ ‘ರಾಷ್ಟ್ರೀಯ ಶಾಸಕರ ಸಮಾವೇಶ’ ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ ‘ಶಾಸಕಾಂಗ ಶೃಂಗಸಭೆ 2025’ರ ವಿಚಾರ ಗೋಷ್ಠಿಯಲ್ಲಿ ತಮ್ಮ ನಾಲ್ಕು ದಶಕಗಳ ಸಂಸದೀಯ ಅನುಭವಗಳನ್ನು ಬಸವರಾಜ ಹೊರಟ್ಟಿ ಹಂಚಿಕೊಂಡಿದ್ದಾರೆ.

‘ದೇಶದ ಅಭಿವೃದ್ಧಿಯಲ್ಲಿ ಶಾಸನ ಸಭೆಗಳ ಹಾಗೂ ಜನಪ್ರತಿನಿಧಿಗಳ ಕ್ರೀಯಾಶೀಲತೆ ಹಾಗೂ ಪಕ್ಷಬೇಧವಿಲ್ಲದ ಅಭಿವೃದ್ಧಿ ಪರ ಚಿಂತನೆಯಿಂದ ಮಾತ್ರ ರಾಷ್ಟ್ರದ ಭವಿಷ್ಯ ಉಜ್ವಲವಾಗಬಲ್ಲದು. ಶಾಸನ ಸಭೆಗಳ ಕಾರ್ಯ ಚಟುವಟಿಕೆಗಳು ಸಮಾಜದ ಮೂಲಭೂತ ಅವಶ್ಯಕತೆಗಳ ಮೇಲೆ ಕೇಂದ್ರೀಕೃತವಾಗಿ ದೇಶದಲ್ಲಿರುವ ಬಡತನ, ಜನರ ಸಂಕಷ್ಟ, ಬವಣೆಗಳ ನಿವಾರಣೆ ನಿಟ್ಟಿನಲ್ಲಿ ಚಿಂತನೆ ನಡೆಸುವ ‘ಚಿಂತಕರ ಚಾವಡಿ’ಗಳಾಗಿ ಪರಿವರ್ತನೆಯಾದಾಗ ಮಾತ್ರ ಪ್ರಜಾಪ್ರಭುತ್ವದ ನೈಜ ಆಶಯಗಳು ಈಡೇರಿಸಲು ಸಾಧ್ಯವಾಗುತ್ತದೆ ಎಂದಿದ್ದಾರೆ.

‘ಜನರ ಬದುಕು, ಬವಣೆಗಳ ಬಗೆ ತಿಳಿದುಕೊಳ್ಳಲು ಜನಪ್ರತಿನಿಧಿಗಳು ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದುವುದು ಅವಶ್ಯಕವಾಗಿದೆ. ಇದರಿಂದ ನಿಜರೂಪದಲ್ಲಿ ಸಾರ್ವಜನಿಕರ ಬದುಕು ಹಸನಗೊಳಿಸಲು ಸಾಧ್ಯ’ ಎಂದೂ ಹೇಳಿದ್ದಾರೆ.

‘ಜಾತಿ, ಧರ್ಮ ಲಿಂಗಗಳ ಬೇಧವಿಲ್ಲದೆ ಜನರ ಮತಗಳಿಂದ ಜನಪ್ರತಿನಿಧಿಯಾಗುವ ಅವಕಾಶ ಪ್ರಜಾಪ್ರಭುತ್ವ ಕಲ್ಪಿಸಿಕೊಟ್ಟಿದ್ದು, ಪ್ರತಿಯೊಬ್ಬ ಜನಪ್ರತಿನಿಧಿಯು ವಿಶ್ವಾಸರ್ಹತೆಯಿಂದ ಔದಾರ್ಯವನ್ನು ಮೆರೆದು ದೇಶದ ಅಭಿವೃದ್ಧಿಗೆ ಬದ್ಧರಾಗಿ ಸಂಸದೀಯ ಮೌಲ್ಯಗಳ ರಕ್ಷಣೆಗೆ ಮುಂದಾಗಬೇಕಿದೆ. ಇಂದಿನ ಆಧುನಿಕ ದಿನಗಳಲ್ಲಿ ಅಭಿವೃದ್ಧಿಯೇ ಪ್ರತಿಯೊಬ್ಬರ ಮೂಲ ಮಂತ್ರವಾಗಬೇಕಿದೆ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

‘ನಾಡಿನ ಸುಸ್ಥಿರ ಹಾಗೂ ಸಮಗ್ರ ಬೆಳವಣಿಗೆಯಲ್ಲಿ ಶಾಸನ ಸಭೆಗಳು ಹಾಗೂ ಜನಪ್ರತಿನಿಧಿಗಳ ಪಾತ್ರ ಹಿಂದೆಂದಿಗಿಂತಲೂ ಹೆಚ್ಚಾಗಿದ್ದು, ಪ್ರತಿಯೊಬ್ಬ ಜನಪ್ರತಿನಿಧಿಯು ಆಧುನಿಕ ಸಂವಹನ ತಂತ್ರಗಾರಿಕೆಗಳನ್ನು ಅಳವಡಿಸಿಕೊಂಡು ಅಭಿವೃದ್ದಿ ಬಗೆಗೆ ಬದ್ಧತೆ ಹೊಂದುವ ಮೂಲಕ ದೇಶದ ಏಳಿಗೆಗೆ ಶ್ರಮಿಸಲು ಮುಂದಾಗಬೇಕು’ ಎಂದಿದ್ದಾರೆ.

‘ಶಾಸನ ಸಭೆಗಳು ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾಗಿ ತಮ್ಮನ್ನು ಸನ್ನದ್ಧಗೊಳಿಸಿಕೊಂಡು ದೇಶದ ಅಗತ್ಯ ಬೇಡಿಕೆಗಳ ಈಡೇರಿಕೆಗೆ ಪಣ ತೊಡಬೇಕಾದ ಅವಶ್ಯಕತೆ ಇದೆ. ದೇಶದ ಸರ್ವಾಂಗೀಣ ಅಭಿವೃದ್ದಿಗೆ ಪ್ರತಿಯೊಬ್ಬ ಜನಪ್ರತಿನಿಧಿಯು ನಿರ್ಧಿಷ್ಟ ನೀತಿ ಸಂಹಿತೆಗಳನ್ನು ಅಳವಡಿಸಿಕೊಂಡು ಅವುಗಳನ್ನು ಸಮರ್ಪಕವಾಗಿ ಕಾರ್ಯ ರೂಪಗೊಳಿಸುವಲ್ಲಿ ಬದ್ಧರಾಗುವ ಮೂಲಕ ದೇಶದ ಒಳಿತಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವುದು ಅಗತ್ಯತೆ’ ಎಂದು ತಿಳಿಸಿದ್ದಾರೆ.

ಮೂರು ದಿನಗಳ ಕಾಲ ನಡೆಯುತ್ತಿರುವ ಶೃಂಗಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಗೋಷ್ಠಿಗಳು, ವಿಚಾರಸಂಕಿರಣ, ಸಂವಾದಗಳು ನಡೆಯಲಿವೆ.

ದೇಶದ ಸಂಸದರು, ವಿವಿಧ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರು, ರಾಜಕೀಯ ತಜ್ಞರು, ನೀತಿ ನಿರೂಪಕರು ಸೇರಿದಂತೆ ಸುಮಾರು 15,000ಕ್ಕೂ ಹೆಚ್ಚು ಗಣ್ಯರು ಪಾಲ್ಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.