ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ 3,646 ಸರ್ಕಾರಿ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳು

Published 27 ಜುಲೈ 2023, 19:30 IST
Last Updated 27 ಜುಲೈ 2023, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದ್ದು, 3,646 ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳಿವೆ. ಕೆಲ ಶಾಲೆಗಳು ಶೂನ್ಯ ದಾಖಲಾತಿ ಇದ್ದರೆ, ಹಲವು ಶಾಲೆಗಳಲ್ಲಿ ಕಾಯಂ ಶಿಕ್ಷಕರೇ ಇಲ್ಲ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿನಿಧಿಸುವ ಸೊರಬ ಕ್ಷೇತ್ರದಲ್ಲಿ 52 ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿನಿಧಿಸುವ ಕನಕಪುರ ತಾಲ್ಲೂಕಿನಲ್ಲಿ 72 ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾಹಿತಿ ಪ್ರಕಾರ ರಾಜ್ಯದ 6,529 ಶಾಲೆಗಳು ಏಕ ಶಿಕ್ಷಕ ಶಾಲೆಗಳಾಗಿವೆ. ಅಂತಹ ಶಾಲೆಗಳಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ 287 ಸರ್ಕಾರಿ ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿಯೂ ಪ್ರವೇಶ ಪಡೆದಿರಲಿಲ್ಲ.   

ಪ್ರಸ್ತುತ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಡೆಯುತ್ತಿದ್ದು, ಒಂದೇ ತಾಲ್ಲೂಕಿನಲ್ಲಿ 10 ರಿಂದ 20 ವರ್ಷ ಪೂರೈಸಿದ ಶಿಕ್ಷಕರಿಗೆ ವರ್ಗಾವಣೆಯ ಅವಕಾಶ ಇರುವುದರಿಂದ ಬಹುತೇಕರು ಬೇರೆ ಶಾಲೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಜಿಲ್ಲಾ ಕೇಂದ್ರಗಳಿಂದ ದೂರದಲ್ಲಿರುವ ಶಾಲೆಗಳಿಂದ ಬಹುತೇಕ ಶಿಕ್ಷಕರು ವರ್ಗಾವಣೆ ತೆಗೆದುಕೊಂಡಿದ್ದಾರೆ. ಅಂತಹ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗಿದೆ. ಅತಿಥಿ ಶಿಕ್ಷಕರ ಸೇವೆ ಪಡೆಯಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT