ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ವರ್ಷಗಳಲ್ಲಿನ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಆಗಲಿ: ಬೊಮ್ಮಾಯಿ

Published 5 ಜುಲೈ 2023, 11:06 IST
Last Updated 5 ಜುಲೈ 2023, 11:06 IST
ಅಕ್ಷರ ಗಾತ್ರ

ದಾವಣಗೆರೆ: '2013 ರಿಂದ 2023ರ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನೂ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು' ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‌‌ಆಗ್ರಹಿಸಿದರು.

ಸಂಸದ ಜಿ.ಎಂ.ಸಿದ್ದೇಶ್ವರ ಅವರ 71ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಬುಧವಾರ ನಗರಕ್ಕೆ ಭೇಟಿ ನೀಡಿದ್ದ ಅವರು ಮಾಧ್ಯಮದವರ ಜೊತೆ ಮಾತನಾಡಿದರು.

'ಯಾವುದೋ ಒಂದು ಪ್ರಕರಣದ ಬದಲಿಗೆ, 2013 ರಿಂದ ಇಲ್ಲಿಯವರೆಗೆ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನೂ ತನಿಖೆಗೆ ಒಪ್ಪಿಸಲಿ' ಎಂದು ಹೇಳಿದರು.

'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವ ಕಾಲ ಸಮೀಪಿಸಿದೆ. ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ' ಎಂದರು.

'ವಿಪಕ್ಷ ನಾಯಕನ ಆಯ್ಕೆ ವಿಚಾರದ ಕುರಿತು ಪಕ್ಷದ ಪ್ರಮುಖರ ಜೊತೆ ಚರ್ಚೆ ನಡೆಸಲಾಗಿದೆ.‌ ಬುಧವಾರ ರಾತ್ರಿ ಇಲ್ಲವೇ ಗುರುವಾರದೊಳಗೆ ಈ ಹುದ್ದೆಗೆ ಸಮರ್ಥ ವ್ಯಕ್ತಿಯೊಬ್ಬರನ್ನು ನೇಮಿಸಲಾಗುತ್ತದೆ. ರಾಷ್ಟ್ರೀಯ ನಾಯಕರು.

ಬೇರೆ ಬೇರೆ ವಿಷಗಳತ್ತ ಗಮನ ಹರಿಸಿದ್ದರಿಂದ ವಿಪಕ್ಷ ನಾಯಕನ ನೇಮಕ ತಡವಾಗಿದೆ' ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT