ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಸದ ಸುಧಾಕರ್ ಮದ್ಯ ಹಂಚಿಕೆ ಬಗ್ಗೆ ಬಿಜೆ‍ಪಿ ಅಧ್ಯಕ್ಷ ನಡ್ಡಾ ಉತ್ತರಿಸಲಿ: ಡಿಕೆಶಿ

Published 8 ಜುಲೈ 2024, 7:54 IST
Last Updated 8 ಜುಲೈ 2024, 7:54 IST
ಅಕ್ಷರ ಗಾತ್ರ

ಬೆಂಗಳೂರು: 'ಬಿಜೆಪಿ ಸಂಸದ ಡಾ ಕೆ. ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿರುವ ಬಗ್ಗೆ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉತ್ತರಿಸಬೇಕು' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದುಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, 'ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು' ಎಂದರು.

.'ಬಿಜೆಪಿಯ ಇಂಥ ಸಂಸ್ಕೃತಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರಿಗಿಂತ ರಾಷ್ಟ್ರೀಯ ನಾಯಕರು ಉತ್ತರಿಸಬೇಕು'  ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT