ಬೆಂಗಳೂರು: ‘ತಜ್ಞ ವೈದ್ಯರೊಬ್ಬರಾದ ಸಂಸದರೊಬ್ಬರು ಮುನಿರತ್ನ ತಲೆಗೆ ಮೊಟ್ಟೆ ಏಟು ಬಿದ್ದಿದ್ದು, ಆಸಿಡ್ ದಾಳಿಯಾಗಿ ಪೆಟ್ಟು ಬಿದ್ದಿದೆ. ಹೀಗಾಗಿ, ತಲೆಕೆಟ್ಟಿದೆ ಎಂದಿದ್ದರು. ಅವರು ಮತ್ತೆ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಮಾಜಿ ಸಂಸದ ಕಾಂಗ್ರೆಸ್ನ ಡಿ.ಕೆ.ಸುರೇಶ್ ಹೇಳಿದರು.

‘ಅಭಿವೃದ್ಧಿ ವಿಚಾರದಲ್ಲಿ ಬೆಂಗಳೂರು 20 ವರ್ಷ ಹಿಂದಕ್ಕೆ ಹೋಗಿದೆ’ ಎಂಬ ಶಾಸಕ ಮುನಿರತ್ನ ಅವರ ಆರೋಪದ ಬಗ್ಗೆ ಸುದ್ದಿಗಾರರು ಶುಕ್ರವಾರ ಪ್ರಶ್ನಿಸಿದಾಗ, ‘ಮುನಿರತ್ನ ಮೊದಲು ತಮ್ಮ ಮೇಲಿನ ಆರೋಪಗಳಿಂದ ಮುಕ್ತರಾಗಿ ಬರಲಿ. ಆನಂತರ ಬೇರೆ ವಿಷಯಗಳ ಬಗ್ಗೆ ಮಾತನಾಡೋಣ’ ಎಂದರು.

ಪಂಚತಾರ ಹೋಟೆಲ್ನಲ್ಲಿ ಕುಳಿತುಕೊಂಡು ಶಿವಕುಮಾರ್ ಅವರು ಶೇ 35 ರಷ್ಟು ಕಮಿಷನ್ ಕೇಳುತ್ತಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಶಿವಕುಮಾರ್ ಅವರು ಪಂಚತಾರ ಹೋಟೆಲ್ಗಳಿಗೆ ಹೋಗುವುದಿಲ್ಲ. ಅದೇನಿದ್ದರು ಬಿಜೆಪಿಯವರ ಸಂಸ್ಕೃತಿ’ ಎಂದರು.

ಡಿ.ಕೆ.ಶಿವಕುಮಾರ್ ಅವರ ಮೇಲಿನ ಆರೋಪಕ್ಕೆ ಪ್ರತಿಯಾಗಿ ತಮ್ಮ ಮೇಲೆ ಸರ್ಕಾರ ಪ್ರಕರಣ ದಾಖಲಿಸಬಹುದು ಎಂಬ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ, ‘ಅವರು ಈ ಮೊದಲೇ ಮಾಡಿಟ್ಟುಕೊಂಡಿರುವ ಎಡವಟ್ಟು ಮತ್ತು ಕುತಂತ್ರಗಳ ಬಗ್ಗೆ ಹೀಗೆ ಸಾರ್ವಜನಿಕವಾಗಿ ಹೇಳಿಕೊಳ್ಳುತ್ತಿದ್ದಾರೆ ಅಷ್ಟೆ. ಅವರು ಯಾವ–ಯಾವ ಠಾಣೆಗಳಲ್ಲಿ ಇರುತ್ತಿದ್ದರು ಎಂಬುದಕ್ಕೆ ದಾಖಲೆಗಳಿವೆ. ಅವುಗಳಿಂದ ಪಲಾಯನ ಮಾಡಲು ಈ ರೀತಿಯ ಹೇಳುತ್ತಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.