ಕೊಪ್ಪಳ: ತುಂಗಭದ್ರಾ ಜಲಾಶಯವನ್ನು ನಿರ್ವಹಣೆ ಮಾಡುವವರು ಯಾರು? ಈ ಕೆಲಸ ಮಾಡುವ ಗುತ್ತಿಗೆದಾರನಿಗೆ ಎಷ್ಟು ಹಣ ಸಂದಾಯವಾಗಿದೆ ಎನ್ನುವ ಮಾಹಿತಿಯನ್ನು ಸರ್ಕಾರ ಬಹಿರಂಗ ಮಾಡಬೇಕು ಎಂದು ಶಾಸಕ ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ.
ತಾಲ್ಲೂಕಿನ ಮುನಿರಾಬಾದ್‌ನಲ್ಲಿರುವ ಜಲಾಶಯಕ್ಕೆ ಭಾನುವಾರ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಯಾರ ಬೇಜವಾಬ್ದಾರಿಯಿಂದ ಗೇಟ್ ಕೊಚ್ಚಿಕೊಂಡು ಹೋಗಿದೆ. ಈ ಕುರಿತು ಸಿಬಿಐ ತನಿಖೆ ನಡೆಯಬೇಕು. ಜಲಾಶಯದ ವಾರ್ಷಿಕ ನಿರ್ವಹಣೆ ಗುತ್ತಿಗೆದಾರರು ಯಾರು? ಅವರಿಗೆ ಪಾವತಿಯಾದ ಹಣ ಎಷ್ಟು ಎನ್ನುವುದು ಗೊತ್ತಾಗಬೇಕು. ಜಲಾಶಯದ ನೀರು ಹೊರಬಿಡುತ್ತಿರುವ ಕಾರಣ ನಮ್ಮ ಭಾಗದ ರೈತರಿಗೆ ದೊಡ್ಡ ಅನ್ಯಾಯವಾಗುತ್ತದೆ. ಸರ್ಕಾರವೇ ಸಂಪೂರ್ಣ ಜವಾಬ್ದಾರಿ ಹೊರಬೇಕು’ ಎಂದು ಆಗ್ರಹಿಸಿದರು.