ಬೆಳಗಾವಿ: 'ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಪ್ರಕರಣದಲ್ಲಿ ರಾಜ್ಯಸಭೆ ಸದಸ್ಯರಾದ ನಾಸೀರ್ ಹುಸೇನ್ ಅವರನ್ನು ನಾಲ್ಕನೇ ಆರೋಪಿ ಮಾಡಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಅವರು ಪ್ರಮಾಣ ವಚನ ಸ್ವೀಕರಿಸಬಾರದು. ಅವರಿಗೆ ಪ್ರಮಾಣ ವಚನಕ್ಕೂ ಅವಕಾಶ ನೀಡಬಾರದು ಎಂದು ಕೋರಿ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗುವುದು' ಎಂದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ದೇಶದ್ರೋಹ ಪ್ರಕರಣದಲ್ಲಿ ಸೂತ್ರಧಾರಿಗಳು ಯಾರು, ಪಾತ್ರಧಾರಿಗಳು ಯಾರು ಎಂದು ಹೇಳಬೇಕು. ಸೂತ್ರಧಾರ ನಾಸೀರ್ ಹುಸೇನ್ ಅವರ ಹೆಸರನ್ನೇ ಎಫ್ಐಆರ್‌ನಲ್ಲಿ ಕೈ ಬಿಟ್ಟಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಬೇಕು' ಎಂದೂ ಆಗ್ರಹಿಸಿದರು.

'ಸರ್ಕಾರ ಇದೂವರೆಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಹಿರಂಗ ಮಾಡಲು ಸಿದ್ಧವಿಲ್ಲ. ರಾಜ್ಯದ ಜನರಿಗೆ ಹೇಳಬಾರದಂಥ ಸಂಗತಿ ಅದರಲ್ಲಿ ಏನಿದೆ? ಈ ಬಗ್ಗೆ ಪೊಲೀಸರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ' ಎಂದೂ ವಿಜಯೇಂದ್ರ ಕಿಡಿ ಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.