ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್!

ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ವ್ಯಕ್ತಿಯೊಬ್ಬ ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ಗೋಕುಲರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published 25 ಜೂನ್ 2024, 19:31 IST
Last Updated 25 ಜೂನ್ 2024, 19:31 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ವ್ಯಕ್ತಿಯೊಬ್ಬ ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ಗೋಕುಲರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರ್ದೇಶಕ ರೂಪೇಶಕುಮಾರ ಶ್ರೀಪಾದ ಅವರ ಕಚೇರಿ ಮೇಲ್ ಐಡಿಗೆ ಜೂನ್ 25ರಂದು ಸಂಜೆ 6.30ವೇಳೆ LongLivepalestine@dnmx.org ಮೇಲ್ ಐಡಿಯಿಂದ ಜೀವ ಬೆದರಿಕೆ ಸಂದೇಶ ಬಂದಿದೆ. 'ನಾವು ನಿಮ್ಮನ್ನು ನಾಶ ಮಾಡುತ್ತೇವೆ. ಬೆಂಕಿಯಲ್ಲಿ ಎಸೆಯುತ್ತೇವೆ. ಉಸಿರುಗಟ್ಟಿ ಸಾಯುತ್ತೀರ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರ' ಎಂದು ಬೆದರಿಸಿ ಸಂದೇಶ ಕಳುಹಿಸಲಾಗಿದೆ.

ಟರ್ಮಿನಲ್ ಉಸ್ತುವಾರಿ ಪ್ರತಾಪ ಅವರಿಗೆ ಸಂದೇಶ ತೋರಿಸಿದ ರೂಪೇಶಕುಮಾರ ಅವರು, ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನಿಸಿ, ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT