ಲಿಂಗಸುಗೂರು: ಸಂವಿಧಾನ 48ನೇ ವಿಧಿ ತಿದ್ದುಪಡಿ ತಂದು ಗೋಹತ್ಯೆ ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರಕ್ಕೆ ಶಿಫಾರಸು ಕಳುಹಿಸಬೇಕೆಂದು ಆಗ್ರಹಿಸಿ ಗೋಸಂರಕ್ಷಣಾ ಪ್ರಿಯರು ಸೋಮವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಸಾಂವಿಧಾನಿಕ ದೇಶಿ ಗೋವಂಶವನ್ನು ರಾಷ್ಟ್ರ ಮಾತೆ ಎಂದು ಘೋಷಿಸಲು ಮತ್ತು ರಾಜ್ಯ ಮಟ್ಟದಲ್ಲಿ ರಾಜ್ಯ ಮಾತೆ ಎಂದು ಘೋಷಿಸಲು ನಿರ್ಣಯ ಕೈಗೊಳ್ಳಬೇಕು. ಗೋ ಕಳ್ಳಸಾಗಣೆಯನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಿ ಅಜೀವ ಕಾರಾಗೃಹ ಶಿಕ್ಷೆ ವಿಧಿಸಬೇಕು. ಪಂಚಗವ್ಯ ಸಂಶೋಧನೆಯನ್ನು ಪ್ರೋತ್ಸಾಹಿಸಿ ಸರ್ಕಾರಿ ಖರೀದಿ ವ್ಯವಸ್ಥೆ ರೂಪಿಸಬೇಕು. ಶಾಲಾ ಮಕ್ಕಳ ಬಿಸಿಯೂಟದಲ್ಲಿ ದೇಶಿ ಹಸುವಿನ ಹಾಲು ಕಡ್ಡಾಯವಾಗಿ ಬಳಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ನಂದಿಶಾಲೆ ಮತ್ತು ಜಿಲ್ಲಾ ಮಟ್ಟದಲ್ಲಿ ಗೋ ಅಭಯಾರಣ್ಯ ಸ್ಥಾಪಿಸಬೇಕು. ಹೆದ್ದಾರಿಗಳಲ್ಲಿ 50-100ಕಿ.ಮೀ. ಗೋ ವಾಹಿನಿ ಆಂಬುಲೆನ್ಸ್ ವ್ಯವಸ್ಥೆ ಇರಬೇಕು. ಪಠ್ಯ ಕ್ರಮದಲ್ಲಿ ಗೋ ವಿಜ್ಞಾನವನ್ನು ಕಡ್ಡಾಯ ವಿಷಯವಾಗಿ ಸೇರಿಸಬೇಕು. ಮೇವು ರಕ್ಷಣೆ ಕಾನೂನು ರೂಪಿಸಿ ಗೋಚರ ಭೂಮಿಗಳನ್ನು ಒತ್ತುವರಿ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-32-1882089414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.