ಲಿಂಗಸುಗೂರು: ಅಹಿಂದ ವರ್ಗಗಳ ನಾಯಕ ಸತೀಶ ಜಾರಕಿಹೊಳಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಅಹಿಂದ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಪರಮೇಶ ಗೋರ್ ಒತ್ತಾಯಿಸಿದ್ದಾರೆ.

ಪಟ್ಟಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಅಹಿಂದ ನಾಯಕರಾಗಿದ್ದ ಸಿದ್ಧರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಮೂರು ವರ್ಷಗಳ ಕಾಲ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಮಾದರಿ ಆಡಳಿತ ನಡೆಸಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸಿದ್ಧರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಈಗ ಮುಖ್ಯಮಂತ್ರಿಯಾಗಲಿರುವುದರಿಂದ ಕೆಪಿಸಿಸಿ ಸ್ಥಾನಕ್ಕೆ ಮತ್ತೊಬ್ಬ ಅಹಿಂದ ನಾಯಕ ಹಾಗೂ ಪಕ್ಷದ ಸಂಘಟನೆಯಲ್ಲಿ ಪರಿಣಿತರಾದ ಸತೀಶ ಜಾರಕಿಹೊಳಿ ಅವರನ್ನು ನೇಮಕ ಮಾಡಬೇಕು’ ಎಂದರು.

ರಾಯಚೂರು ಜಿಲ್ಲೆಯಲ್ಲಿ 4 ಜನ ಕಾಂಗ್ರೆಸ್ ಶಾಸಕರು ಹಾಗೂ ಮೂರು ಜನ ವಿಧಾನಪರಿಷತ್ ಸದಸ್ಯರಿದ್ದಾರೆ ಅವರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡುವಲ್ಲಿ ಕಾಂಗ್ರೆಸ್ ವರಿಷ್ಠರು ಮುಂದಾಗಬೇಕು. ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಅವರಿಗೆ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಸ್ಥಾನ ನೀಡಬೇಕು ಎಂದರು.

ಗದ್ದೆನಗೌಡ ಪಾಟೀಲ, ಮೋನುದ್ದೀನ್, ಅಮರೇಶ ಮಡಿವಾಳ, ಮೌನೇಶ ಪೂಜಾರಿ, ಪ್ರೇಮಗೌಡ ಹಾಲಬಾವಿ, ರಾಘವೇಂದ್ರ ತುಪ್ಪದ್, ಗಂಗಾಧರ ನೀರಲಕೇರಿ ಇನ್ನಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-32-1073255671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.